ಧಾರವಾಡ :ಮದುವೆ ನಿಶ್ಚಯವಾಗಿದ್ದ ಯುವತಿಗೆ ಗ್ರಾಪಂ ಸದಸ್ಯ ನೀಡಿದ ಕಿರುಕುಳಕ್ಕೆ ಬೇಸತ್ತು ಯುವತಿಯೋರ್ವಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಧಾರವಾಡ ತಾಲೂಕಿನ ಬೊಗೂರ ಗ್ರಾಮದಲ್ಲಿ ನಡೆದಿದೆ.
ಗ್ರಾಪಂ ಸದಸ್ಯ ಮಲ್ಲಪ್ಪ ಮಾಳವಾಡ ಕಿರುಕುಳ ಕೊಟ್ಟ ಕಾರಣ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಮುಂದಿನ ಒಂದು ತಿಂಗಳಲ್ಲಿ ಸರಸ್ವತಿ ಮದುವೆ ನಡೆಯಬೇಕಿತ್ತು. ಆದರೆ, ತನ್ನನ್ನು ಮದುವೆಯಾಗುವಂತೆ ಗ್ರಾಪಂ ಮಲ್ಲಪ್ಪ ಮಾಳವಾಡ ಯುವತಿಗೆ ಕಿರುಕುಳ ನೀಡುತ್ತಿದ್ದನಂತೆ.