ಧಾರವಾಡ :ಸರ್ಕಾರದ ಆದೇಶದಂತೆ ನಾಳೆ ಮೇ 24ರ ಬೆಳಗ್ಗೆ 6 ರಿಂದ ಜೂನ್ 7ರ ಬೆಳಗ್ಗೆ 6 ಗಂಟೆವರೆಗೆ ಜಿಲ್ಲೆಯಲ್ಲಿಯೂ ಲಾಕ್‌ಡೌನ್ ವಿಸ್ತರಿಸಲಾಗಿದೆ.
‘ಜಿಲ್ಲಾ ಉಸ್ತುವಾರಿ ಸಚಿವರ ಸಭೆ ನಿರ್ಣಯದಂತೆ ಇನ್ನಷ್ಟು ಕಠಿಣ ನಿಯಮಗಳನ್ನು ಜಿಲ್ಲೆಯಲ್ಲಿ ಜಾರಿಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಹೇಳಿದ್ದಾರೆ.
ನಗರ ಪೊಲೀಸ್ ಆಯುಕ್ತ ಲಾಬೂರಾಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ,ಮಾಧ್ಯಮ ಪ್ರತಿನಿಧಿಗಳ ಜೊತೆಗೆ ವರ್ಚುವಲ್ ಮೂಲಕ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದರು.