ಹುಬ್ಬಳ್ಳಿ:ಜೆಡಿಎಸ್ ಪಕ್ಷದಿಂದ ಹಮ್ಮಿಕೊಳ್ಳಲಾಗಿರುವ ಜನತಾ ಜಲಧಾರೆ ಯಾತ್ರೆಗೆ ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಚಾಲನೆ ನೀಡಿದರು. ವಾಣಿಜ್ಯನಗರಿಗೆ ಆಗಮಿಸಿದ ಮಾಜಿ ಸಿಎಂಗೆ ವಾದ್ಯಗಳೊಂದಿಗೆ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಮೂರು ಸಾವಿರ ಮಠ ಹಾಗೂ ದುರ್ಗದ ಬೈಲ್ ಸ್ಥಳಗಳಿಗೆ ಭೇಟಿ ನೀಡಿದ ಅವರಿಗೆ ಪಕ್ಷದ ಮುಖಂಡರು ಅಭಿನಂದನೆ ಸಲ್ಲಿಸಿದರು.
ಮಳೆಯಲ್ಲೇ ಜನತಾ ಜಲಧಾರೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಎಚ್ಡಿಕೆ - HDK who started the Janata Jaladhare program in the rain
ಹೆಚ್.ಡಿ.ಕುಮಾರಸ್ವಾಮಿ ಅವರು ಜನತಾ ಜಲಧಾರೆ ಯಾತ್ರೆಗೆ ಹುಬ್ಬಳ್ಳಿಯಲ್ಲಿ ಗುರುವಾರ ಚಾಲನೆ ನೀಡಿದರು.
![ಮಳೆಯಲ್ಲೇ ಜನತಾ ಜಲಧಾರೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಎಚ್ಡಿಕೆ ಜನತಾ ಜಲಧಾರೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಎಚ್ಡಿಕೆ](https://etvbharatimages.akamaized.net/etvbharat/prod-images/768-512-15143498-thumbnail-3x2-bin.jpg)
ಜನತಾ ಜಲಧಾರೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಎಚ್ಡಿಕೆ
ಹುಬ್ಬಳ್ಳಿಯಲ್ಲಿ ಸಂಜೆಯಿಂದಲೇ ಮಳೆ ಸುರಿಯುತ್ತಿದ್ದು, ಇದರ ನಡುವೆಯೇ ಜನತಾ ಜಲಧಾರೆಯ ಸಭಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಬೆರಳೆಣಿಕೆಯಷ್ಟು ಕಾರ್ಯಕರ್ತರು ಮಾತ್ರ ಪಾಲ್ಗೊಂಡಿದ್ದು, ಕಂಡುಬಂತು.
ಇದನ್ನೂ ಓದಿ:ಕಾರು ಅಪಘಾತಕ್ಕೆ ಕಾರಣವಾಯ್ತು 'ಇಲಿ'; ಮಗು ಸಾವು, ಮೂವರಿಗೆ ಗಾಯ