ಹುಬ್ಬಳ್ಳಿ:ಹಸಿದವರ ಹೊಟ್ಟೆ ತುಂಬಿಸುವ ಇಂದಿರಾ ಕ್ಯಾಂಟಿನ್ಗಳಿಗೆ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸುವ ಮೂಲಕ ವ್ಯವಸ್ಥಿತ ರೀತಿಯಲ್ಲಿ ನಿರ್ವಹಣೆ ಮಾಡಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮುಂದಾಗಿದೆ.
ಹು-ಧಾ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 9 ಇಂದಿರಾ ಕ್ಯಾಂಟಿನ್ಗಳು ಕಾರ್ಯನಿರ್ವಹಿಸುತ್ತಿವೆ. ಲಾಕ್ಡೌನ್ ಅವಧಿಯಲ್ಲಿ ಸರ್ಕಾರದ ಆದೇಶದ ಮೇರೆಗೆ ಇಂದಿರಾ ಕ್ಯಾಂಟೀನ್ಗಳಲ್ಲಿ ಉಚಿತವಾಗಿ ಆಹಾರ ವಿತರಿಸಲಾಗ್ತಿದೆ. ಕ್ಯಾಂಟೀನ್ಗಳ ನಿರ್ವಹಣೆಗೆ ಸಂಬಂಧಪಟ್ಟಂತೆ ಸಾರ್ವಜನಿಕರಿಂದ ದೂರುಗಳು ಕೇಳಿ ಬಂದ ಹಿನ್ನೆಲೆ ನಿಗಾ ಇಡಲು ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ.