ಹುಬ್ಬಳ್ಳಿ: ಹು-ಧಾ ಪಾಲಿಕೆಯಲ್ಲಿ ಕರ್ತವ್ಯ ನಿರ್ವಹಿಸಿತ್ತಿರುವ 2,500 ಪೌರಕಾರ್ಮಿಕರಿಗೆ ಉಚಿತವಾಗಿ ಆರೋಗ್ಯ ತಪಾಸಣೆ ನಡೆಸಿ, ಕೋವಿಡ್-19 ಸುರಕ್ಷತಾ ಕ್ರಮಗಳ ಕುರಿತು ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಲಾಗಿದೆ.
ನಗರದ ಪಾಲಿಕೆ ಆಸ್ಪತ್ರೆ ವತಿಯಿಂದ ನಿತ್ಯ ಬೆಳಗ್ಗೆ ದೇಹದ ಉಷ್ಣತೆ ಪರೀಕ್ಷಿಸಲಾಗುತ್ತದೆ. ಬಿಪಿ, ರಕ್ತ ಪರೀಕ್ಷೆ ನಡೆಸಿ ಸಾಮಾನ್ಯ ಕಾಯಿಲೆಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕರ್ತವ್ಯದ ವೇಳೆಯಲ್ಲಿ ವೈಯಕ್ತಿಕ ಶುಚಿತ್ವ ಕಾಪಾಡಿಕೊಳ್ಳುವುದು, ಸರಿಯಾಗಿ ಮಾಸ್ಕ್ ಹಾಕಿಕೊಳ್ಳುವುದು. ಸ್ಯಾನಿಟೈಸರ್ ಬಳಕೆಯ ಕುರಿತು ಪೌರಕಾರ್ಮಿಕರಿಗೆ ಅರಿವು ಮೂಡಿಸಲಾಗುತ್ತಿದೆ.