ಧಾರವಾಡ:ಸಮಾನ ಕೆಲಸಕ್ಕೆ ಸಮಾನ ವೇತನಕ್ಕೆ ಆಗ್ರಹಿಸಿ ಆರೋಗ್ಯ ಇಲಾಖೆ ಹೊರ ಗುತ್ತಿಗೆ ಸಿಬ್ಬಂದಿ ಜಿಲ್ಲಾ ಆರೋಗ್ಯ ಇಲಾಖೆ ಎದುರು ಪ್ರತಿಭಟನೆ ನಡೆಸಿದರು.
ನಮಗೆ ಚಪ್ಪಾಳೆ ಬೇಡ, ವೇತನ ಬೇಕು: ಆರೋಗ್ಯ ಇಲಾಖೆ ಹೊರ ಗುತ್ತಿಗೆ ಸಿಬ್ಬಂದಿ ಪ್ರತಿಭಟನೆ - ಧಾರವಾಡದಲ್ಲಿ ಪ್ರತಿಭಟನೆ
ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವಂತೆ ಒತ್ತಾಯಿಸಿ ಧಾರವಾಡದಲ್ಲಿ ಆರೋಗ್ಯ ಇಲಾಖೆ ಎದುರು ನೂರಕ್ಕೂ ಹೆಚ್ಚು ಆರೋಗ್ಯ ಇಲಾಖೆ ಹೊರ ಗುತ್ತಿಗೆ ನೌಕರರು ಪ್ರತಿಭಟನೆ ನಡೆಸಿದ್ದಾರೆ.
ಆರೋಗ್ಯ ಇಲಾಖೆ ಹೊರಗುತ್ತಿಗೆ ಸಿಬ್ಬಂದಿ ಪ್ರತಿಭಟನೆ
ನಮಗೆ ಚಪ್ಪಾಳೆ ಬೇಡ, ವೇತನ ಬೇಕು. ವೇತನ ನೀಡುವವರೆಗೂ ಪ್ರತಿಭಟನೆ ನಡೆಸುವುದಾಗಿ ಸರ್ಕಾರಕ್ಕೆ ಎಚ್ಚರಿಸಿದರು. ಸಮಾನ ವೇತನ, ಸೇವಾ ಭದ್ರತೆ ಸೇರಿದಂತೆ ಗುತ್ತಿಗೆ ಮತ್ತು ಹೊರ ಗುತ್ತಿಗೆ ಸಿಬ್ಬಂದಿಯ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.