ಕರ್ನಾಟಕ

karnataka

ETV Bharat / state

ದಾಸ್ತಿಕೊಪ್ಪ ಗ್ರಾಮದಲ್ಲಿ ಕೋವಿಡ್ -19 ಸಮೀಕ್ಷೆ ನಡೆಸಿದ ಅಧಿಕಾರಿಗಳು - Kalaghatagi taluk latest news

ಕಲಘಟಗಿ ತಾಲೂಕಿನ ದಾಸ್ತಿಕೊಪ್ಪ ಗ್ರಾಮದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಕೊರೊನಾ ಜಾಗೃತಿ ಮೂಡಿಸಿ ಆರೋಗ್ಯ ಸಮೀಕ್ಷೆ ನಡೆಸಿದರು.

Kalaghatagi
Kalaghatagi

By

Published : Jul 2, 2020, 6:53 PM IST

ಕಲಘಟಗಿ: ತಾಲೂಕಿನ ದಾಸ್ತಿಕೊಪ್ಪ ಗ್ರಾಮದಲ್ಲಿ ಕೋವಿಡ್-19 ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯಿಂದ ಗ್ರಾಮದಲ್ಲಿ ಜಾಗೃತಿ ಮೂಡಿಸಿ ಆರೋಗ್ಯ ಸಮೀಕ್ಷೆ ನಡೆಸಲಾಯಿತು.

ಗ್ರಾಮದಲ್ಲಿನ ಸೀಲ್ ಡೌನ್ ಮತ್ತು ಬಫರ್ ಜೋನ್ ಸ್ಥಳಗಳಲ್ಲಿ ಸಮೀಕ್ಷೆ ನಡೆಸಿದ ಅಧಿಕಾರಿಗಳು, ಜ್ವರ, ಕೆಮ್ಮು, ನೆಗಡಿಯಂತಹ ಲಕ್ಷಣ ಕಂಡು‌ಬಂದರೆ ಕೂಡಲೇ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಗ್ರಾಮಸ್ಥರಿಗೆ ಸೂಚಿಸಿದರು.

ತಾ.ಪಂ‌‌. ಉಪಾಧ್ಯಕ್ಷ ಚಂದ್ರಗೌಡ ಪಾಟೀಲ, ಕೋವಿಡ್-19 ಅಧಿಕಾರಿ ಹಾಗೂ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಡಾ.ಬಸವರಾಜ ಬಾಸೂರ, ಆರೋಗ್ಯ ಶಿಕ್ಷಣಾಧಿಕಾರಿ ಭರತ ಬಹುರೂಪಿ, ಗ್ರಾ.ಪಂ. ಅಧ್ಯಕ್ಷ ಬಸವರಾಜ ಹುಗ್ಗಿ, ಅಭಿವೃದ್ಧಿ ಅಧಿಕಾರಿಗಳು, ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು,ಕಾರ್ಯದರ್ಶಿಗಳು ಸಮೀಕ್ಷೆಯಲ್ಲಿದ್ದರು.

ABOUT THE AUTHOR

...view details