ಹುಬ್ಬಳ್ಳಿ:ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿಯೇ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಕಿಮ್ಸ್ ಆಸ್ಪತ್ರೆಗೆ ಬರುವ ಸಾರ್ವಜನಿಕರು ಭಯದಲ್ಲಿಯೇ ಸಂಚರಿಸುವಂತಹ ವಾತಾವರಣ ನಿರ್ಮಾಣವಾಗಿರುವುದು ವಿಷಾದಕರ ಸಂಗತಿಯಾಗಿದೆ.
ಹೌದು, ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿರುವ ಕಿಮ್ಸ್ ಆಸ್ಪತ್ರೆಗೆ ಧಾರವಾಡ, ಗದಗ, ಹಾವೇರಿ ಸೇರಿದಂತೆ ಹಲವಾರು ಜಿಲ್ಲೆಗಳಿಂದ ಜನರು ಚಿಕಿತ್ಸೆಗಾಗಿ ಆಗಮಿಸುತ್ತಾರೆ. ಆದರೇ ಇಲ್ಲಿನ ಬೀದಿ ನಾಯಿಗಳ ಹಾವಳಿಯಿಂದ ಭಯದಲ್ಲಿಯೇ ಸಂಚರಿಸುವ ಸ್ಥಿತಿ ನಿರ್ಮಾಣವಾಗಿದೆ.
ಕಿಮ್ಸ್ ಆವರಣದಲ್ಲೇ ಹೆಚ್ಚಾಯ್ತು ಬೀದಿ ನಾಯಿಗಳ ಹಾವಳಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಇಲ್ಲಿನ ಪದ್ಮರಾಜನಗರದಲ್ಲಿ ಕರುವಿನ ಮೇಲೆ ಬೀದಿ ನಾಯಿಗಳ ದಾಳಿ ನಡೆಸಿರುವ ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ಸಂಭವಿಸಿದೆ. ಹಂದಿ ಮರಿಯೊಂದನ್ನು ಬೀದಿ ನಾಯಿಗಳು ಕಚ್ಚಿ ಕೊಲ್ಲುತ್ತಿರುವ ದೃಶ್ಯವೊಂದು ಕಂಡು ಬಂದಿದೆ. ಬೀದಿ ನಾಯಿಗಳ ಹಾವಳಿಯಿಂದ ಸಾರ್ವಜನಿಕರು ಭಯಬೀತರಾಗಿದ್ದಾರೆ.
ಕಿಮ್ಸ್ ಆವರಣದಲ್ಲೀಗ ಹಂದಿ, ನಾಯಿಗಳದ್ದೇ ಕಾರುಬಾರು!
ಬೀದಿ ನಾಯಿಗಳ ಹಾಗೂ ಹಂದಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹು-ಧಾ ಮಹಾನಗರ ಪಾಲಿಕೆ ಬೀದಿ ನಾಯಿಗಳ ನಿಯಂತ್ರಣಕ್ಕೆ ಯಾವುದೇ ಕ್ರಮ ಕೈಗೊಳ್ಳದೇ ಕಣ್ಣು ಮುಚ್ಚಿ ಕುಳಿತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.ಇಲ್ಲಿನ ವಸತಿ ಗೃಹದ ನಿವಾಸಿಗಳು ಹಲವು ಬಾರಿ ಪಾಲಿಕೆ ಅಧಿಕಾರಿಗಳ ಗಮನಕ್ಕೆ ತಂದರು ಪ್ರಯೋಜನ ವಾಗಿಲ್ಲ ಎನ್ನಲಾಗಿದೆ.