ಕರ್ನಾಟಕ

karnataka

ETV Bharat / state

ಧಾರವಾಡ ಜಿಲ್ಲಾ ನ್ಯಾಯಾಲಯಕ್ಕೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಭೇಟಿ

ಅ.12 ರಿಂದ ನ್ಯಾಯಾಲಯದ ಕಲಾಪಗಳು ಪ್ರಾರಂಭವಾಗಲಿದ್ದು, ಇಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಅವರು ಜಿಲ್ಲಾ ನ್ಯಾಯಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

High Court chief justice AS Oka
High Court chief justice AS Oka

By

Published : Oct 9, 2020, 8:14 PM IST

ಧಾರವಾಡ :ಅ.12 ರಿಂದ ನ್ಯಾಯಾಲಯದ ಕಲಾಪಗಳು ಪ್ರಾರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಅಭಯ ಶ್ರೀನಿವಾಸ ಓಕಾ ಅವರು ಇಂದು ಜಿಲ್ಲಾ ನ್ಯಾಯಾಲಯ, ಸಿವಿಲ್ ನ್ಯಾಯಾಲಯ ಆವರಣ ಹಾಗೂ ವಕೀಲರ ಸಂಘಕ್ಕೆ ಭೇಟಿ ನೀಡಿದ್ದರು.

ಜಿಲ್ಲಾ ನ್ಯಾಯಾಲಯಕ್ಕೆ ಭೇಟಿ ನೀಡಿದ ಅವರು, ಕೋವಿಡ್ ನಿಯಂತ್ರಣದ ಮಾರ್ಗಸೂಚಿಗಳನ್ನು ಅಳವಡಿಕೆಯ ಕುರಿತು ಪರಿಶೀಲನೆ ನಡೆಸಿದರು.

ನಿಬಂಧನೆಗೊಳಪಟ್ಟು ಪ್ರತಿನಿತ್ಯ ಐದು ಜನ ಸಾಕ್ಷಿಗಳ ವಿಚಾರಣೆ ಕೈಗೊಳ್ಳಲು ಅವಕಾಶವಿರುವುದರಿಂದ ಈ ಹಂತದಲ್ಲಿ ಕೋವಿಡ್ ನಿಯಂತ್ರಣದ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು. ಸಾಕ್ಷಿಗಳು, ಕಕ್ಷಿದಾರರು, ವಕೀಲರು, ಸಿಬ್ಬಂದಿ ವರ್ಗ ಎಲ್ಲರ ಆರೋಗ್ಯ ಮುಖ್ಯವಾಗಿರುವುದರಿಂದ ಮಾರ್ಗಸೂಚಿಯನುಸಾರ ನ್ಯಾಯಾಲಯದ ಪ್ರವೇಶ, ಪ್ರಕರಣ ದಾಖಲಿಸುವಿಕೆ, ವಿಚಾರಣೆ ಕೈಗೊಳ್ಳಬೇಕು ಎಂದು ಅವರು ಸೂಚಿಸಿದರು.

ಈ ವೇಳೆ ಹೈಕೋರ್ಟಿನ ಮಹಾವಿಲೇಖನಾಧಿಕಾರಿ ರಾಜೇಂದ್ರ ಬಾದಾಮಿಕರ್, ಧಾರವಾಡ ಪೀಠದ ನ್ಯಾಯಮೂರ್ತಿಗಳಾದ ನರೇಂದ್ರಕುಮಾರ್, ವಿ. ಶ್ರೀಶಾನಂದ, ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಉಮೇಶ ಅಡಿಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆರ್.ಎಸ್. ಚಿನ್ನಣ್ಣವರ, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಆರ್. ದಿಲೀಪ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ, ಮಹಾನಗರ ಪಾಲಿಕೆ ಆಯುಕ್ತ ಡಾ: ಸುರೇಶ್ ಇಟ್ನಾಳ, ಉಪವಿಭಾಗಾಧಿಕಾರಿ ಡಾ: ಬಿ. ಗೋಪಾಲಕೃಷ್ಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಯಶವಂತ ಮದೀನಕರ ಮತ್ತಿತರರ ಅಧಿಕಾರಿಗಳು, ನ್ಯಾಯಾಧೀಶರು ಇದ್ದರು.

For All Latest Updates

ABOUT THE AUTHOR

...view details