ಹುಬ್ಬಳ್ಳಿ : ಹುಬ್ಬಳ್ಳಿ -ಧಾರವಾಡ ಮಹಾನಗರಪಾಲಿಕೆ ಚುನಾವಣೆ ಮೀಸಲಾತಿ ಕುರಿತು ಜನವರಿ 3ರೊಳಗೆ ಮೀಸಲಾತಿ ಪ್ರಕಟಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಜ. 3ರೊಳಗೆ ಅವಳಿನಗರ ಪಾಲಿಕೆ ಮೀಸಲಾತಿ ಪ್ರಕಟಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ! - ಹುಬ್ಬಳ್ಳಿ -ಧಾರವಾಡ ಪಾಲಿಕೆ ಚುನಾವಣೆ ಮೀಸಲು ಸುದ್ದಿ
ಜನವರಿ 3ರೊಳಗಾಗಿ 2020ರಲ್ಲಿ ನಡೆಯಲಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯ ಮೀಸಲಾತಿ ಪ್ರಕಟಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
2020ರಲ್ಲಿ ನಡೆಯಲಿರುವ ಪಾಲಿಕೆ ಚುನಾವಣೆಯ ಮೀಸಲಾತಿ ಪ್ರಕಟಿಸುವ ಕುರಿತು, ಗುರುನಾಥ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯು ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.
ಸರ್ಕಾರ ಬದಲಾಗುತ್ತಿದ್ದಂತೆ ಈ ಹಿಂದೆ ಆಡಳಿತದಲ್ಲಿದ್ದ ಸರ್ಕಾರ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಮೀಸಲು ಹಿಂಪಡೆದು ಹೊಸದಾಗಿ ಪ್ರಕಟಿಸುವುದಾಗಿ ತಿಳಿಸಿತ್ತು. ಆದರೆ, ಇಲ್ಲಿಯವರೆಗೆ ಪ್ರಕಟಿಸದೆ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಅರ್ಜಿದಾರರ ಪರ ವಕೀಲರು ಪೀಠಕ್ಕೆ ತಿಳಿಸಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು, ಜನವರಿ 3ರೊಳಗೆ ಮೀಸಲು ಪ್ರಕಟಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿ, ವಿಚಾರಣೆಯನ್ನು ಜನವರಿ 6ಕ್ಕೆ ಮುಂದೂಡಿದೆ.