ಹುಬ್ಬಳ್ಳಿ:ನಗರದ ಕೆಎಲ್ಇ ಕಾಲೇಜಿನಲ್ಲಿ ಪಾಕ್ ಪರ ಘೋಷಣೆ ಕೂಗಿದ ಕಾಶ್ಮೀರಿ ವಿದ್ಯಾರ್ಥಿಗಳನ್ನು ಕೋರ್ಟ್ಗೆ ಹಾಜರುಪಡಿಸಿ ಜೈಲಿಗೆ ಕರೆದುಕೊಂಡು ಹೋಗುವಾಗ ಕೋರ್ಟ್ ಆವರಣದಲ್ಲಿ ಹೈಡ್ರಾಮ ಸೃಷ್ಟಿಯಾಗಿತ್ತು.
ಪಾಕ್ ಪರ ಘೋಷಣೆ ಕೂಗಿದ್ದ ಆರೋಪಿಗಳ ಮೇಲೆ ಹಲ್ಲೆಗೆ ಯತ್ನ
ಕಾಶ್ಮೀರ ಮೂಲದ ವಿದ್ಯಾರ್ಥಿಗಳಾದ ಅಮಿರ್, ಬಾಸಿತ್, ತಾಲಿಬ್ನನ್ನು ಬಂಧಿಸಿ 3ನೇ ಜೆಎಂಎಫ್ಸಿ ಕೋರ್ಟ್ಗೆ ಹಾಜರುಪಡಿಸಿ, ಜೈಲಿಗೆ ಕರೆದೊಯ್ಯುವಾಗ ಹಿಂದೂಪರ ಸಂಘಟನೆ ಕಾರ್ಯಕರ್ತರು ಹಾಗೂ ವಕೀಲರು ಆರೋಪಿಗಳ ವಿರುದ್ದ ಘೋಷಣೆ ಕೂಗಿ ಆರೋಪಿಗಳ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ.
ಕಾಶ್ಮೀರ ಮೂಲದ ವಿದ್ಯಾರ್ಥಿಗಳಾದ ಅಮಿರ್, ಬಾಸಿತ್, ತಾಲಿಬ್ನನ್ನು ಬಂಧಿಸಿ 3ನೇ ಜೆಎಂಎಫ್ಸಿ ಕೋರ್ಟ್ಗೆ ಹಾಜರುಪಡಿಸಿ, ಜೈಲಿಗೆ ಕರೆದೊಯ್ಯುವಾಗ ಹಿಂದೂಪರ ಸಂಘಟನೆ ಕಾರ್ಯಕರ್ತರು ಹಾಗೂ ವಕೀಲರು ಆರೋಪಿಗಳ ವಿರುದ್ಧ ಘೋಷಣೆ ಕೂಗಿ ಆರೋಪಿಗಳ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ಗೊಂದಲದ ವಾತಾವರಣ ನಿರ್ಮಾಣವಾಗಿ ಪೊಲೀಸರು ಹಿಂದೂಪರ ಸಂಘಟನೆ ಕಾರ್ಯಕರ್ತರನ್ನು ಚದುರಿಸಲು ಹರಸಾಹಸಪಡಬೇಕಾಯಿತು.
ಇದೇ ವೇಳೆ ಹಿಂದೂ ಕಾರ್ಯಕರ್ತನೋರ್ವ ಪಾಕಿಸ್ತಾನ ಮುರ್ದಾಬಾದ್ ಎನ್ನುವ ಬದಲು ಆವೇಶ ಭರಿತವಾಗಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಹಾಕಿದ ಪ್ರಸಂಗವು ನಡೆಯಿತು. ಆಗ ಪರಿಸ್ಥಿತಿ ಕೈ ಮೀರುವುದನ್ನು ಅರಿತ ಪೊಲೀಸರು ಹಿಂದೂ ಕಾರ್ಯಕರ್ತರನ್ನು ಚದುರಿಸಿ ಆರೋಪಿಗಳನ್ನು ಪೊಲೀಸ್ ವಾಹನದಲ್ಲಿ ಕೂಡಿಸಿಕೊಂಡು ಸಬ್ ಜೈಲಿಗೆ ಬಿಟ್ಟು ಬಂದರು.