ಹುಬ್ಬಳ್ಳಿ:ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಮೇಲಿನ ಹಲ್ಲೆಯನ್ನು ಮೂಕ ಪ್ರೇಕ್ಷಕರಂತೆ ನೋಡುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು ಎಂದು ಸಮಾಜ ಪರಿವರ್ತನಾ ಸಮುದಾಯದ ಮಖ್ಯಸ್ಥ ಎಸ್.ಆರ್.ಹಿರೇಮಠ ಆಗ್ರಹಿಸಿದ್ದಾರೆ.
ಗೃಹ ಸಚಿವ ಅಮಿತ್ ಶಾ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಲಿ: ಎಸ್.ಆರ್.ಹಿರೇಮಠ - ಸಮಾಜ ಪರಿವರ್ತನಾ ಸಮುದಾಯದ ಮಖ್ಯಸ್ಥ ಎಸ್.ಆರ್.ಹಿರೇಮಠ
ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಮೇಲಿನ ಹಲ್ಲೆಯನ್ನು ಮೂಕ ಪ್ರೇಕ್ಷಕರಂತೆ ನೋಡುತ್ತಿರುವ ಕೇಂದ್ರ ಸರ್ಕಾರದ ಗೃಹ ಸಚಿವ ಅಮಿತ್ ಶಾ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು ಎಂದು ಸಮಾಜ ಪರಿವರ್ತನಾ ಸಮುದಾಯದ ಮಖ್ಯಸ್ಥ ಎಸ್.ಆರ್.ಹಿರೇಮಠ ಆಗ್ರಹಿಸಿದ್ದಾರೆ.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆ.ಎನ್.ಯು ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ ಘಟನೆ ತಲೆ ತಗ್ಗಿಸುವಂತೆ ಮಾಡಿದೆ ಎಂದರು. ಈ ನಾಡಿನ ಮೌಲ್ಯಗಳನ್ನು ಎತ್ತಿ ಹಿಡಿದಂತಹ ಶರಣರು, ಸಂತರು, ಸೂಫಿಗಳಾದ ಬುದ್ದ, ಬಸವ,ಅಂಬೇಡ್ಕರ್ ಬಾಳಿದ ಈ ನಾಡಿನಲ್ಲಿ ಸ್ವತಂತ್ರದ ಸಮಾನತೆ ಮತ್ತು ನ್ಯಾಯವನ್ನು ಗಾಳಿಗೆ ತೂರಿ ದೆಹಲಿ ಪೊಲೀಸರು ನಡೆಸಿದ ಈ ದಾಳಿಯನ್ನು ಕಾನೂನು ಕ್ರಮ ಕೈಗೊಳ್ಳದೇ ನೋಡುತ್ತ ಕುಳಿತ್ತಿರುವುದು ದುರಾದೃಷ್ಟಕರ ಸಂಗತಿಯಾಗಿದ್ದು, ಕೂಡಲೇ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಅವರು ಒತ್ತಾಯಿಸಿದರು.
ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಲು ಹೊರಟ್ಟಿದ್ದಾರೆ. ಇದು ದುರದುಷ್ಟಕರ ಸಂಗತಿಯಾಗಿದೆ. ಅಕ್ರಮ ಸಂಪಾದನೆ ಮಾಡಿ ಜೈಲಿನಲ್ಲಿ ಇರುವಂತವರು ಸಾರ್ವಜನಿಕ ಜೀವನದಲ್ಲಿ ಇರಬಾರದು ಎಂದು ಕಿಡಿಕಾರಿದರು.