ಧಾರವಾಡ :ರಾಜ್ಯದಲ್ಲಿ ಕೊರೊನಾ ಪ್ರಕರಣ ಹೆಚ್ಚಳ ಹಿನ್ನೆಲೆ ಮತ್ತೆ ಲಾಕ್‌ಡೌನ್ ಘೋಷಿಸುವ ವಿಚಾರವಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಇನ್ನೂ ನಿರ್ಧಾರ ಆಗಿಲ್ಲ. ಆದರೆ, ಕೊರೊನಾ ನಿಯಂತ್ರಿಸಲು ಪರಿಣಿತರ ಸಮಿತಿ ಶಿಫಾರಸು ಮಾಡಿದೆ. ಈ ಬಗ್ಗೆ ಸಿಎಂ ಜೊತೆ ಚರ್ಚಿಸಿ ನಿರ್ಧರಿಸಲಾಗುವುದು ಎಂದರು.
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲಾ-ಕಾಲೇಜುಗಳಿಗೆ ರಜೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಪರಿಣಿತರ ಸಮಿತಿಯ ಶಿಫಾರಸಿನಂತೆ ಆರೋಗ್ಯ, ಶಿಕ್ಷಣ ಇಲಾಖೆಯವರೊಂದಿಗೆ ಚರ್ಚಿಸಿ ನಿರ್ಧಾರ ಮಾಡಲಾಗುವುದು. ಬೇರೆ ರಾಜ್ಯಗಳಲ್ಲಿ ಲಾಕ್‌ಡೌನ್ ಘೋಷಣೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಆಯಾ ರಾಜ್ಯಗಳಲ್ಲಿನ ಪರಿಸ್ಥಿತಿ ನೋಡಿಕೊಂಡು ಅವರು ನಿರ್ಧಾರ ಮಾಡಿದ್ದಾರೆ ಎಂದರು.