ಧಾರವಾಡ: ಕೋವಿಡ್ ಕುರಿತು ಜನರಿಗೆ ಜಾಗೃತಿ ಮೂಡಿಸುವುದು, ಸೋಂಕಿತರ ಚಿಕಿತ್ಸೆಗಾಗಿ ಶ್ರಮಿಸುತ್ತಿರುವ 75ಕ್ಕೂ ಹೆಚ್ಚು ಕೊರೊನಾ ವಾರಿಯರ್ಸ್ಗೆ ಜಿಲ್ಲಾ ಮಟ್ಟದಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹಾಗೂ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಸತ್ಕರಿಸಿದರು.
ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಕೊರೊನಾ ವಾರಿಯರ್ಸ್ಗೆ ಸನ್ಮಾನ - Jagadish shettar news
ಕಿಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಉತ್ತಮ ಚಿಕಿತ್ಸೆ ನೀಡುವಲ್ಲಿ ನಿರತರಾಗಿರುವ ಸಿಬ್ಬಂದಿ ಹಾಗೂ ಅವರ ಕುಟುಂಬದವರನ್ನು ಸತ್ಕರಿಸಲಾಯಿತು.
Corona warriors
ಕಿಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಉತ್ತಮ ಚಿಕಿತ್ಸೆ ನೀಡುವಲ್ಲಿ ನಿರತರಾಗಿರುವ ಸಿಬ್ಬಂದಿ ಹಾಗೂ ಅವರ ಕುಟುಂಬದವರನ್ನು ಸನ್ಮಾನಿಸಲಾಯಿತು.
ವೈದ್ಯಕೀಯ ಸಿಬ್ಬಂದಿ, ಕಂದಾಯ ಇಲಾಖೆಯ ಗ್ರಾಮ ಲೆಕ್ಕಾಧಿಕಾರಿಗಳು, ಪೌರಕಾರ್ಮಿಕರು ಕೊರೊನಾ ವಾರಿಯರ್ಸ್ ಆಗಿ ಕೋವಿಡ್-19 ನಿಯಂತ್ರಣ ಕಾರ್ಯದಲ್ಲಿ ಉತ್ತಮವಾಗಿ ತೊಡಗಿಕೊಂಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಲಾಯಿತು.