ಧಾರವಾಡ: ಭೀಕರ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಲ್ಲಿನ ಹೊಯ್ಸಳನಗರದಲ್ಲಿ ತಡರಾತ್ರಿ ಸಂಭವಿಸಿದೆ.
ಧಾರವಾಡದಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರು ಬೈಕ್ ಸವಾರರು ಸಾವು - ಭೀಕರ ರಸ್ತೆ ಅಪಘಾತ ಇಬ್ಬರು ಬೈಕ್ ಸವಾರರು ಸಾವು
ಬೈಕ್ ಸವಾರರಿಗೆ ವಾಹನವೊಂದು ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ಈ ದುರಂತ ಸಂಭವಿಸಿದೆ.
ಭೀಕರ ರಸ್ತೆ ಅಪಘಾತ
ಅಪರಿಚಿತ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರರ ದೇಹಗಳು ಛಿದ್ರ ಛಿದ್ರವಾಗಿವೆ. ಮೃತರ ಗುರುತು ಕೂಡ ಸಿಗದ ಸ್ಥಿತಿಯಲ್ಲಿ ದೇಹಗಳು ಪತ್ತೆಯಾಗಿವೆ. ಘಟನೆ ನಡೆದ ತಕ್ಷಣವೇ ವಾಹನ ಸವಾರ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ದೇಹದ ಭಾಗಗಳನ್ನು ಆಯ್ದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಈ ಕುರಿತು ದೂರು ದಾಖಲಿಸಿಕೊಂಡಿರುವ ಪೊಲೀಸರು ಪರಾರಿಯಾಗಿರುವ ವಾಹನದ ಪತ್ತೆಗಾಗಿ ಶೋಧ ನಡೆಸುತ್ತಿದ್ದಾರೆ.