ಹುಬ್ಬಳ್ಳಿ : ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿರುವ ಅರಳಿಕಟ್ಟಿ ಬಡಾವಣೆಯಲ್ಲಿ ಪೊಲೀಸರ ಮೇಲೆ ಕಲ್ಲೂ ತೂರಾಟ ನಡೆಸಿದ ಪ್ರಕರಣದ ತನಿಖೆ ನಡೆಯುತ್ತಿದೆ. ಈಗಲೇ ಅದಕ್ಕೆ ಸಂಬಂಧಿಸಿದಂತೆ ಏನೂ ಹೇಳಲಾಗುವುದಿಲ್ಲ ಎಂದು ಹು-ಧಾ ಪೊಲೀಸ್ ಕಮಿಷನರ್ ಆರ್ ದಿಲೀಪ್ ಹೇಳಿದರು.
ಪೊಲೀಸರ ಮೇಲೆ ಕಲ್ಲು ತೂರಾಟ ಕೇಸ್.. ಈಗಲೇ ಏನೂ ಹೇಳಲ್ಲ.. ಹು-ಧಾ ಪೊಲೀಸ್ ಕಮಿಷನರ್ ಸ್ಪಷ್ಟನೆ - ಹುಬ್ಬಳ್ಳಿ ಸುದ್ದಿ
ಕಲ್ಲು ತೂರಾಟದಿಂದ ನಾಲ್ಕು ಜನ ಪೊಲೀಸ್ ಸಿಬ್ಬಂದಿಗೆ ಗಾಯವಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿದ್ದೇವೆ. ತನಿಖೆ ನಡೆಯುತ್ತಿರುವುದರಿಂದ ಈಗಲೇ ಏನನ್ನೂ ಹೇಳುವುದಿಲ್ಲ ಎಂದರು.

ಆರ್ ದಿಲೀಪ್
ಪೊಲೀಸ್ ಕಮೀಷನರ್ ಆರ್ ದಿಲೀಪ್ ಹೀಗಂದರು..
ನಗರದಲ್ಲಿಂದು ಮಾತನಾಡಿದ ಅವರು, ಮಸೀದಿಯಲ್ಲಿ ಕೆಲವರು ನಮಾಜ್ ಮಾಡಲು ಮುಂದಾಗಿದ್ದರು. ನಮಾಜ್ ಮಾಡಲು ಬಂದವರಿಗೆ ಪೊಲೀಸರು ನಮಾಜ್ ಮಾಡದಂತೆ ಬುದ್ಧಿ ಹೇಳಿದ್ದರು. ಈ ಸಂದರ್ಭದಲ್ಲಿ ಸಮಾಜದ ಕೆಲ ಮುಖಂಡರು ಸಹ ನಮಾಜ್ ಮಾಡದಂತೆ ಬುದ್ಧಿ ಹೇಳಿದ್ದರು. ಇದೇ ಸಂದರ್ಭದಲ್ಲಿ ಕೆಲವರು ಪೊಲೀಸರ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ.
ಕಲ್ಲು ತೂರಾಟದಿಂದ ನಾಲ್ಕು ಜನ ಪೊಲೀಸ್ ಸಿಬ್ಬಂದಿಗೆ ಗಾಯವಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿದ್ದೇವೆ. ತನಿಖೆ ನಡೆಯುತ್ತಿರುವುದರಿಂದ ಈಗಲೇ ಏನನ್ನೂ ಹೇಳುವುದಿಲ್ಲ ಎಂದರು.