ಹುಬ್ಬಳ್ಳಿ:ನನ್ನ ಮೇಲೆ ಪಕ್ಷ ಹಾಗೂ ನಾಯಕರು ಭರವಸೆ ಇಟ್ಟು ಜವಾಬ್ದಾರಿ ನೀಡಿದ್ದಾರೆ. ಅವರ ಭರವಸೆಗೆ ತಕ್ಕಂತೆ ಕಾರ್ಯ ನಿರ್ವಹಿಸುವ ಮೂಲಕ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ ಎಂದು ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆ ನೂತನ ಮೇಯರ್ ಈರೇಶ್ ಅಂಚಟಗೇರಿ ಹೇಳಿದರು.
ಅವಳಿ ನಗರದ ಜನರ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಮೇಯರ್ ಆಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನನ್ನ ಮೇಲೆ ಪಕ್ಷ ಹಾಗೂ ನಾಯಕರು, ಭರವಸೆ ಇಟ್ಟು ಜವಾಬ್ದಾರಿ ನೀಡಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಜಗದೀಶ್ ಶೆಟ್ಟರ್, ಅರವಿಂದ್ ಬೆಲ್ಲದ ಅವರಿಗೆ ನಾನು ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.
ನಾವು ಪಾಲಿಕೆ ಆಡಳಿತವನ್ನು ಜನರ ಮನೆ ಬಾಗಿಲಗೆ ತೆಗೆದುಕೊಂಡು ಹೋಗುತ್ತೇವೆ. ಸಾರ್ವಜನಿಕ ಕುಂದು - ಕೊರತೆಗಳನ್ನು ಶೀಘ್ರದಲ್ಲೇ ಇತ್ಯರ್ಥ ಮಾಡುತ್ತೇವೆ. ಜನರ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವ ಮೂಲಕ ಜನಪರ ಕಾರ್ಯ ಮಾಡುತ್ತೇನೆ. ಪಕ್ಷನಿಷ್ಠವಾಗಿ ಕರ್ತವ್ಯ ನಿರ್ವಹಿಸುತ್ತೇನೆ ಎಂದು ಭರವಸೆ ನೀಡಿದರು.
ನೂತನ ಉಪ ಮೇಯರ್ ಉಮಾ ಮುಕುಂದ್ ಮಾತನಾಡಿ, ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವೆ. ಹುಬ್ಬಳ್ಳಿ - ಧಾರವಾಡ ಅವಳಿ ನಗರದ ಜನತೆಯ ಸಮಸ್ಯೆಗಳಿಗೆ ಧ್ವನಿಯಾಗಿ ಕೆಲಸ ನಿರ್ವಹಣೆ ಮಾಡುವೆ. ಪಕ್ಷದ ಪ್ರಮುಖರು ನನ್ನ ಮೇಲೆ ಭರವಸೆ ಇಟ್ಟು ಜವಾಬ್ದಾರಿ ನೀಡಿದ್ದಾರೆ. ಅವರ ಋಣ ತೀರಿಸುವ ಕೆಲಸ ಮಾಡುವೆ ಎಂದು ಹೇಳಿದರು.
ಇದನ್ನೂ ಓದಿ:ಮತ್ತೆ ಬಿಜೆಪಿ ತೆಕ್ಕೆಗೆ ಹುಬ್ಬಳ್ಳಿ - ಧಾರವಾಡ ಪಾಲಿಕೆ: ಮೇಯರ್ ಆಗಿ ಈರೇಶ, ಉಪಮೇಯರ್ ಆಗಿ ಉಮಾ ಆಯ್ಕೆ