ಕರ್ನಾಟಕ

karnataka

By

Published : Oct 15, 2020, 3:46 PM IST

ETV Bharat / state

ಕಸ ವಿಲೇವಾರಿಗೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾದ ಹು-ಧಾ ಮಹಾನಗರ ಪಾಲಿಕೆ

ಹಸಿ ಮತ್ತು ಒಣ ಕಸ ವಿಂಗಡಣೆ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿ ಮಾಡಲು ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಮುಂದಾಗಿದೆ. ಘನ ತ್ಯಾಜ್ಯ ಸಮರ್ಪಕ ನಿರ್ವಹಣೆ, ಭೂಭರ್ತಿ (ಲ್ಯಾಂಡ್ ಫಿಲ್ಲಿಂಗ್‌) ಪ್ರಮಾಣವನ್ನು ಗಣನೀಯವಾಗಿ ಕಡಿಮೆ ಮಾಡುವುದು, ಪರಿಸರ ಸಂರಕ್ಷಣೆ ಹಾಗೂ ಮರು ಬಳಕೆಯ ವಸ್ತುಗಳನ್ನು ತ್ಯಾಜ್ಯದಿಂದ ವಿಂಗಡಿಸುವ ಉದ್ದೇಶವನ್ನು ಪಾಲಿಕೆ ಹೊಂದಿದೆ.

hu-dha-metropolitan-polike-of-stringent-action-for-garbage-disposal
ಹು-ಧಾ ಮಹಾನಗರ ಪಾಲಿಕೆ

ಹುಬ್ಬಳ್ಳಿ: ಹು-ಧಾ ಮಹಾನಗರದಲ್ಲಿ ತ್ಯಾಜ್ಯ ವಿಲೇವಾರಿ ದೊಡ್ಡ ತಲೆನೋವಾಗಿ ಪರಿಣಮಿಸಿತ್ತು. ಈ ಕುರಿತು ಇಲ್ಲಿನ ಮಹಾನಗರ ಪಾಲಿಕೆ ಹತ್ತು ಹಲವು ಯೋಜನೆ ಜಾರಿಗೆ ತರುವ ಮೂಲಕ ತ್ಯಾಜ್ಯ ವಿಲೇವಾರಿಗೆ ಸಮರ್ಪಕ ಮಾರ್ಗ ಕಂಡುಕೊಂಡಿದ್ದು, ಈಗ ಹೊಸದೊಂದು ನಿರ್ಧಾರಕ್ಕೆ ಮುಂದಾಗಿದೆ.

ಹಸಿ ಕಸವನ್ನು ಗೊಬ್ಬರವಾಗಿ ಪರಿವರ್ತಿಸುವ ಧಾರವಾಡದ ವಿನ್ಡ್ರೋ ಕಂಪೋಸ್ಟಿಂಗ್ ಘಟಕ ಪ್ರಾಯೋಗಿಕವಾಗಿ ಕಾರ್ಯಾಚರಣೆ ಆರಂಭಿಸಿದೆ. ಹಸಿ ಕಸವನ್ನು ಪ್ರತ್ಯೇಕವಾಗಿ ಪಡೆಯುವ ಗಂಭೀರ ಪ್ರಯತ್ನ ಆರಂಭವಾಗಿದ್ದು, ಕಸವನ್ನು ವಿಂಗಡಿಸಿಯೇ ನೀಡುವಂತೆ ಸಂಗ್ರಹಣೆ ಸಿಬ್ಬಂದಿ ಈಗಾಗಲೇ ಜನರಿಗೆ ತಾಕೀತು ಮಾಡುತ್ತಿದ್ದಾರೆ. ಈ ಪ್ರಕ್ರಿಯೆ ಈಗ ಯಶಸ್ವಿಯಾಗಿ ನಡೆಯುತ್ತಿದೆ.

ಹಸಿ ಮತ್ತು ಘನಾ ತ್ಯಾಜ್ಯವನ್ನು ವಿಂಗಡಿಸಿ ಪಡೆಯುತ್ತಿರುವ ಪಾಲಿಕೆ

ಹಸಿ ಮತ್ತು ಒಣ ಕಸ ವಿಂಗಡಣೆ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿ ಮಾಡಲು ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಮುಂದಾಗಿದ್ದು, ಘನ ತ್ಯಾಜ್ಯ ಸಮರ್ಪಕ ನಿರ್ವಹಣೆ, ಭೂಭರ್ತಿ (ಲ್ಯಾಂಡ್ ಫಿಲ್ಲಿಂಗ್‌) ಪ್ರಮಾಣವನ್ನು ಗಣನೀಯವಾಗಿ ಕಡಿಮೆ ಮಾಡುವುದು, ಪರಿಸರ ಸಂರಕ್ಷಣೆ ಹಾಗೂ ಮರು ಬಳಕೆಯ ವಸ್ತುಗಳನ್ನು ತ್ಯಾಜ್ಯದಿಂದ ವಿಂಗಡಿಸುವ ಉದ್ದೇಶವನ್ನು ಪಾಲಿಕೆ ಹೊಂದಿದೆ.

ಕಳೆದೆರಡು ವರ್ಷಗಳ ಹಿಂದೆಯೇ ಪಾಲಿಕೆ ಆಟೊ ಟಿಪ್ಪರ್‌ ಮೂಲಕ ಮನೆ-ಮನೆ ಕಸ ಸಂಗ್ರಹಣೆಗೆ ಚಾಲನೆ ನೀಡಿತ್ತು. ಆದರೆ ಆರಂಭಿಕ ಹಂತದಲ್ಲಿ ಕಸ ವಿಂಗಡಣೆ ಮಾಡಿದರೂ ಅದನ್ನು ಸಂಪನ್ಮೂಲವಾಗಿ ಪರಿವರ್ತಿಸುವ ಯೋಜನೆ ರೂಪುಗೊಂಡಿರಲಿಲ್ಲ. ಅಲ್ಲದೇ ಹಸಿ ಮತ್ತು ಒಣ ಕಸವನ್ನು ವಿಂಗಡಿಸಿ ನೀಡಿದರೂ ಕಸ ಸಂಗ್ರಹಣೆ ವಾಹನ ಸಿಬ್ಬಂದಿ ಅದನ್ನು ಒಟ್ಟಾಗಿಯೇ ರಾಶಿ ಹಾಕುತ್ತಿದ್ದರು.

ABOUT THE AUTHOR

...view details