ಹುಬ್ಬಳ್ಳಿ: ಅವಳಿನಗರದಲ್ಲಿ ಈಗಾಗಲೇ ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದು, ಅಕ್ಟೋಬರ್ 5 ರಂದು ಸಂಸದ ಪ್ರಹ್ಲಾದ್ ಜೋಶಿ ಉದ್ಘಾಟನೆ ಮಾಡಲಿದ್ದಾರೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಹೇಳಿದರು.
ಹು-ಧಾ ಸ್ಮಾರ್ಟ್ ಸಿಟಿ ಕಾಮಗಾರಿ ಪ್ರಹ್ಲಾದ್ ಜೋಶಿ ಅವರಿಂದ ಉದ್ಘಾಟನೆ: ಸಚಿವ ಭೈರತಿ ಬಸವರಾಜ್ - ಹುಬ್ಬಳ್ಳಿ ಧಾರವಾಡ ಸ್ಮಾರ್ಟ್ ಸಿಟಿ ಕಾಮಗಾರಿ
ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಈಗಾಗಲೇ ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಸಂಸದ ಪ್ರಹ್ಲಾದ್ ಜೋಶಿ ಉದ್ಘಾಟನೆ ಮಾಡಲಿದ್ದಾರೆ ಎಂದು ಸಚಿವ ಭೈರತಿ ಬಸವರಜ್ ಮಾಹಿತಿ ನೀಡಿದ್ದಾರೆ.
ನಗರದಲ್ಲಿಂದು ಮಾಧ್ಯಗೋಷ್ಟಿಯಲ್ಲಿ ಮಾತನಾಡಿದ ಅವರು, ಇಂದಿರಾ ಗಾಜಿನ ಮನೆಯಲ್ಲಿ 17.50 ಕೋಟಿ ವೆಚ್ಚದಲ್ಲಿ ಕಾಮಗಾರಿ, ಚಿಟಗುಪ್ಪಿ ಆಸ್ಪತ್ರೆಯ ಪಕ್ಕ 19.50 ಕೋಟಿ ವೆಚ್ಚದಲ್ಲಿ 100 ಹಾಸಿಗೆಗಳ ಆಸ್ಪತ್ರೆ ಕಾಮಗಾರಿ ನಡೆಯುತ್ತಿದೆ. ಮೀನು ಮಾರುಕಟ್ಟೆ ಬಳಿ ರಸ್ತೆ ಬದಿಯಲ್ಲಿ ವ್ಯಾಪಾರ ಮಾಡಲಾಗುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಹೀಗಾಗಿ 5 ಕೋಟಿ ರೂ. ವೆಚ್ಚದಲ್ಲಿ ಮಾರುಕಟ್ಟೆ ನಿರ್ಮಾಣ ಮಾಡಲಾಗುವುದು ಎಂದರು.
ಸ್ಮಾರ್ಟ್ ಸಿಟಿ ಕಾಮಗಾರಿಗಳ ಜಾರಿಯಲ್ಲಿ ವಿಳಂಬವಾಗಿದೆ. ನಗರದ ಚೆನ್ನಮ್ಮ ವೃತ್ತದಲ್ಲಿ ಫ್ಲೈ ಓವರ್ ನಿರ್ಮಾಣಕ್ಕೆ ಟೆಂಡರ್ ಕರೆಯಲಾಗುವುದು. ಅನಧಿಕೃತ ಲೇಔಟ್ಗಳನ್ನು ನಿರ್ಮಾಣ ಮಾಡಿದರೆ ದಂಡ ವಸೂಲಿ ಮೂಲಕ ಕಾನೂನು ರೀತಿಯಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು. ಈಗಾಗಲೇ 34 ಕೋಟಿ ರೂಪಾಯಿ ಟ್ಯಾಕ್ಸ್ ಸಂಗ್ರಹವಾಗಿದೆ. ಮೂರು ಮಹಾನಗರಗಳಿಗೆ 24x7 ಕುಡಿಯುವ ನೀರಿನ ಕಾಮಗಾರಿಗೆ 2,800 ಕೋಟಿ ಅನುದಾನ ಬೇಕಿದೆ. ಈ ಕುರಿತು ಮುಖ್ಯಮಂತ್ರಿಗಳ ಜೊತೆಗೆ ಚರ್ಚೆ ನಡೆಸಲಾಗುವುದು. ಬಳ್ಳಾರಿ, ವಿಜಯಪುರ, ಮೈಸೂರು, ಕಲಬುರಗಿಯಲ್ಲೂ ಸ್ಮಾರ್ಟ್ ಸಿಟಿ ಯೋಜನೆ ಜಾರಿಗೊಳಿಸಲು ತಿಳಿಸಲಾಗುವುದು ಎಂದಿದ್ದಾರೆ.