ಹುಬ್ಬಳ್ಳಿ: ಟೈರ್ ಒಡೆದು ಇನ್ನೋವಾ ಕಾರು ಪಲ್ಟಿಯಾಗಿರುವ ಘಟನೆ ಹುಬ್ಬಳ್ಳಿಯ ಗೋಕುಲ್ ರಸ್ತೆಯ ಅರ್ಬನ್ ಓಯಸಿಸ್ ಮಾಲ್ ಎದುರು ನಡೆದಿದೆ.
ಹುಬ್ಬಳ್ಳಿಯಲ್ಲಿ ಟೈರ್ ಒಡೆದು ಕಾರು ಪಲ್ಟಿ: ತಪ್ಪಿದ ಅನಾಹುತ - ಹುಬ್ಬಳ್ಳಿ ಕಾರಿನ ಟೈರ್ ಬ್ಲಾಸ್ಟ್ ನ್ಯೂಸ್
ಹುಬ್ಬಳ್ಳಿಯ ಅರ್ಬನ್ ಓಯಾಸಿಸ್ ಮಾಲ್ ಎದುರು ರಸ್ತೆ ಕಾಮಗಾರಿ ನಡೆಯುತ್ತಿದ್ದು, ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನ ಟೈರ್ ಬ್ಲಾಸ್ಟ್ ಆಗಿತ್ತು.
Car
ಅರ್ಬನ್ ಓಯಾಸಿಸ್ ಮಾಲ್ ಎದುರು ರಸ್ತೆ ಕಾಮಗಾರಿ ನಡೆಯುತ್ತಿದ್ದು, ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನ ಟೈರ್ ಬ್ಲಾಸ್ಟ್ ಆಗಿದೆ. ನಿತ್ಯ ನೂರಾರು ವಾಹನಗಳು ಈ ರಸ್ತೆಯಲ್ಲಿ ಓಡಾಡುತ್ತಿದ್ದು, ಭಾರಿ ಅನಾಹುತ ತಪ್ಪಿದೆ.
ಘಟನೆ ವೇಳೆ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಉತ್ತರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.