ಹುಬ್ಬಳ್ಳಿ-ಧಾರವಾಡ:ಅವಳಿನಗರದ ಜನತೆಯ ಬಹುದಿನಗಳ ಬೇಡಿಕೆಯಾದ ಟ್ರಾಫಿಕ್ ಐಲ್ಯಾಂಡ್ ಚೆನ್ನಮ್ಮ ವೃತ್ತದಲ್ಲಿ 300 ಕೋಟಿ ರೂಪಾಯಿ ವೆಚ್ಚದಲ್ಲಿ ಫ್ಲೈಓವರ್ ನಿರ್ಮಿಸುವುದಕ್ಕೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಚೆನ್ನಮ್ಮ ವೃತ್ತದಲ್ಲಿ 300 ಕೋಟಿ ವೆಚ್ಚದಲ್ಲಿ ಫ್ಲೈಓವರ್ ನಿರ್ಮಾಣಕ್ಕೆ ಕೇಂದ್ರ ಅನುಮೋದನೆ - fly over in hubli
ಹುಬ್ಬಳ್ಳಿ ಜನರ ಬಹುದಿನದ ಬೇಡಿಕೆಯಾಗಿದ್ದ ಚೆನ್ನಮ್ಮ ವೃತ್ತದಲ್ಲಿ ಫ್ಲೈಓವರ್ ನಿರ್ಮಾಣ ಕನಸು ನನಸಾಗುವ ಕಾಲ ಹತ್ತಿರದಲ್ಲಿದ್ದು, 300 ಕೋಟಿ ವೆಚ್ಚದಲ್ಲಿ ಫ್ಲೈಓವರ್ ನಿರ್ಮಾಣಕ್ಕೆ ಕೇಂದ್ರ ಅಸ್ತು ಎಂದಿದೆ ಎಂದು ಸಚಿವ ಪ್ರಹ್ಲಾದ್ ಜೋಶಿ ಸಂತಸ ಹಂಚಿಕೊಂಡಿದ್ದಾರೆ.
![ಚೆನ್ನಮ್ಮ ವೃತ್ತದಲ್ಲಿ 300 ಕೋಟಿ ವೆಚ್ಚದಲ್ಲಿ ಫ್ಲೈಓವರ್ ನಿರ್ಮಾಣಕ್ಕೆ ಕೇಂದ್ರ ಅನುಮೋದನೆ hubli chanamma](https://etvbharatimages.akamaized.net/etvbharat/prod-images/768-512-8628247-583-8628247-1598877617753.jpg)
ಫ್ಲೈಓವರ್ ನಿರ್ಮಾಣಕ್ಕೆ ಕೇಂದ್ರ ಅನುಮೋದನೆ
ಈ ಮೂಲಕ ಹುಬ್ಬಳ್ಳಿ ಜನರ ಬಹುದಿನದ ಕನಸಾಗಿದ್ದ ಫ್ಲೈ ಓವರ್ ನಿರ್ಮಾಣ ಈಗ ಈಡೇರಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಖುಷಿ ಹಂಚಿಕೊಂಡಿದ್ದಾರೆ.
ತಮ್ಮ ಫೇಸ್ಬುಕ್ ಖಾತೆಯಲ್ಲಿ ಈ ವಿಷಯ ಹಂಚಿಕೊಂಡಿರುವ ಅವರು, ಈ ಭಾಗದ ಜನರ ಬೇಡಿಕೆಗೆ ಶೀಘ್ರದಲ್ಲಿ ಸ್ಪಂದಿಸಿ, ಈ ಯೋಜನೆಗೆ ಅನುಮೋದನೆ ನೀಡಿದ್ದಕ್ಕಾಗಿ ಈ ಭಾಗದ ಜನತೆಯ ಪರವಾಗಿ ಕೇಂದ್ರ ಸರ್ಕಾರಕ್ಕೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರ ಸಚಿವ ನಿತಿನ್ ಗಡ್ಕರಿ ಅವರಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.