ಹುಬ್ಬಳ್ಳಿ: ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ನಿರ್ದೇಶನವನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಒಂದು ವೇಳೆ ಉಲ್ಲಂಘಿಸಿದರೆ ಭಾರಿ ದಂಡ ತೆರಬೇಕಾಗುತ್ತೆ ಎಂದು ಪಾಲಿಕೆ ಆಯುಕ್ತರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.
ಎಲ್ಲೆಂದರಲ್ಲಿ ಉಗುಳಿದರೆ ದಂಡ ತೆರಬೇಕಾಗುತ್ತದೆ: ಪಾಲಿಕೆ ಆಯುಕ್ತರಿಂದ ಎಚ್ಚರಿಕೆ - ಹುಬ್ಬಳ್ಳಿ ಲೇಟೆಸ್ಟ್ ನ್ಯೂಸ್
ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ನಿರ್ದೇಶನವನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಒಂದು ವೇಳೆ ಉಲ್ಲಂಘಿಸಿದರೆ ಭಾರಿ ದಂಡ ತೆರಬೇಕಾಗುತ್ತೆ ಎಂದು ಪಾಲಿಕೆ ಆಯುಕ್ತರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.
![ಎಲ್ಲೆಂದರಲ್ಲಿ ಉಗುಳಿದರೆ ದಂಡ ತೆರಬೇಕಾಗುತ್ತದೆ: ಪಾಲಿಕೆ ಆಯುಕ್ತರಿಂದ ಎಚ್ಚರಿಕೆ ಪಾಲಿಕೆ ವತಿಯಿಂದ ಕಟ್ಟುನಿಟ್ಟಿನ ಆದೇಶ](https://etvbharatimages.akamaized.net/etvbharat/prod-images/768-512-6832341-thumbnail-3x2-ramo.jpg)
Hubli city corporation implement new rules
ಪಾಲಿಕೆ ವ್ಯಾಪ್ತಿಯಲ್ಲಿ ಅವಳಿ ನಗರದ ಸಾರ್ವಜನಿಕರು ಅನವಶ್ಯಕವಾಗಿ ಹೊರಗೆ ಬರಕೂಡದು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮಾಸ್ಕ್ ಧರಿಸದೆ ತಿರುಗಾಡಿದರೆ, ಸಾರ್ವಜನಿಕ ಪ್ರದೇಶಗಳಲ್ಲಿ ಉಗುಳಿದರೆ, ಬಯಲಿನಲ್ಲಿ ಶೌಚ ಮಾಡಿದರೆ ಮೊದಲನೇ ಬಾರಿ 200 ರೂಪಾಯಿ ದಂಡ, ಎರಡನೇ ಬಾರಿ 300 ರೂಪಾಯಿ ದಂಡ ವಿಧಿಸಲಾಗುವುದು ಎಂದು ಆಯುಕ್ತರು ಪ್ರಕಟಣೆ ಹೊರಡಿಸಿದ್ದಾರೆ.