ಕರ್ನಾಟಕ

karnataka

ETV Bharat / state

ವರೂರು ಗ್ರಾಪಂ; ಪತ್ನಿ ಅಧ್ಯಕ್ಷೆ, ಪತಿ ಉಪಾಧ್ಯಕ್ಷ - ಗ್ರಾಮ ಪಂಚಾಯತ್‌ನಲ್ಲಿ ಹೊಸ ಇತಿಹಾಸ

ಇತ್ತೀಚೆಗೆ ಮುಕ್ತಾಯಗೊಂಡಿದ್ದ ಗ್ರಾಮ ಪಂಚಾಯತ್‌ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಹುಬ್ಬಳ್ಳಿಯ ದಂಪತಿಗಳು ಇದೀಗ ಒಂದೇ ಗ್ರಾಮ ಪಂಚಾಯತ್‌ನ ಅಧ್ಯಕ್ಷ-ಉಪಾಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ. ವಿಶಾಲಾಕ್ಷಿ ಚೆನ್ನಬಸನಗೌಡ ಹನಮಂತಗೌಡ್ರ ಅಧ್ಯಕ್ಷೆಯಾಗಿ, ಇವರ ಪತಿ ಚೆನ್ನಬಸಬನಗೌಡ ಹನಮಂತಗೌಡ್ರ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

hubli
ಗ್ರಾಮ ಪಂಚಾಯತ್‌ ಅಧ್ಯಕ್ಷೆಯಾಗಿ ಪತ್ನಿ, ಉಪಾಧ್ಯಕ್ಷನಾಗಿ ಪತಿ

By

Published : Feb 3, 2021, 12:11 PM IST

ಹುಬ್ಬಳ್ಳಿ: ರಾಜ್ಯದ ಪಂಚಾಯತ್​ ರಾಜ್ ಇತಿಹಾಸದಲ್ಲೇ ಮೊದಲ ಬಾರಿಗೆ ಗ್ರಾಮ ಪಂಚಾಯತವೊಂದರಲ್ಲಿ ಪತ್ನಿ ಅಧ್ಯಕ್ಷೆಯಾಗಿ, ಪತಿ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಹುಬ್ಬಳ್ಳಿ ತಾಲೂಕಿನ ವರೂರು ಗ್ರಾಮ ಪಂಚಾಯತಿಗೆ ಅಧ್ಯಕ್ಷೆಯಾಗಿ ಪತ್ನಿ ಹಾಗೂ ಉಪಾಧ್ಯಕ್ಷರಾಗಿ ಪತಿ ಕಾರ್ಯನಿರ್ವಹಣೆ ಮಾಡಲಿದ್ದಾರೆ. ವಿಶಾಲಾಕ್ಷಿ ಚೆನ್ನಬಸನಗೌಡ ಹನಮಂತಗೌಡ್ರ ಅಧ್ಯಕ್ಷೆಯಾಗಿ, ಇವರ ಪತಿ ಚೆನ್ನಬಸನಗೌಡ ಹನಮಂತಗೌಡ್ರ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ದಂಪತಿಗಳನ್ನ ಆಯ್ಕೆ ಮಾಡಲು ವರೂರು ಹಾಗೂ ಕಂಪ್ಲಿಕೊಪ್ಪ ಗ್ರಾಮದ ಪ್ರತಿಯೊಬ್ಬರು ಶ್ರಮಿಸಿದ್ದು, ಯಾವುದೇ ರೀತಿಯ ತೊಂದರೆಗಳಿಲ್ಲದೇ ಆಯ್ಕೆ ಪ್ರಕ್ರಿಯೆ ನಡೆದಿದೆ. ವರೂರ ಗ್ರಾಮ ಪಂಚಾಯತಿಗೆ ಆಯ್ಕೆಯಾದ ನೂತನ ಸದಸ್ಯರು ಹಾಗೂ ಗ್ರಾಮಸ್ಥರು ಪಕ್ಷಾತೀತವಾಗಿ ಪತಿ, ಪತ್ನಿಯನ್ನು ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆ ಮಾಡಿದ್ದು, ಉತ್ತಮವಾಗಿ ಕಾರ್ಯ ನಿರ್ವಹಿಸುವಂತೆ ದಂಪತಿಯಿಂದ ಆಶಿಸುತ್ತಿದ್ದಾರೆ.

ABOUT THE AUTHOR

...view details