ಹುಬ್ಬಳ್ಳಿ :ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಅಪರಾಧಿಗಳಿಗೆ ಇಲ್ಲಿನ 5ನೇ ಅಪರ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 1 ಲಕ್ಷದ 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಹುಬ್ಬಳ್ಳಿಯ ಕಸಬಾಪೇಟ ಪೊಲೀಸ್ ಠಾಣಾ ವ್ಯಾಪ್ತಿಯ ಪಠಾಣಗಲ್ಲಿಯ ಸರ್ಕಲ್ ಬಳಿ ಶಾಬುದ್ದೀನ್ ಎಂಬಾತನನ್ನು ಶಮಶುದ್ದಿನ್ ಸವಣೂರು, ಜುಬೇರ್ ಅಹ್ಮದ್ ಕಲಬುರ್ಗಿ ಎಂಬುವರು ಚಾಕುವಿನಿಂದ ಇರಿದು ಕೊಲೆ ಮಾಡಿದ್ದರು.
ಈ ಕುರಿತು ಮೃತನ ತಂದೆ ನೀಡಿದ ದೂರಿನ ಅನ್ವಯ ತನಿಖಾಧಿಕಾರಿ ಶ್ಯಾಮರಾವ್ ಸಜ್ಜನ್ ತನಿಖೆ ನಡೆಸಿ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ್ದರು. ಈ ಕುರಿತು 5ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಗಂಗಾಧರ ಕೆ.ಎನ್ ಅವರು ಜೀವಾವಧಿ ಶಿಕ್ಷೆ ಮತ್ತು 1ಲಕ್ಷದ 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಸರ್ಕಾರಿ ವಕೀಲೆ ಸುಮಿತ್ರಾ ಅಂಚಟಗೇರಿ ವಾದ ಮಂಡಿಸಿದ್ದರು.