ಹುಬ್ಬಳ್ಳಿ: ಸಾಮಾಜಿಕ ಜಾಲತಾಣದ ಮೂಲಕ ಯುವಕನನ್ನು ಪರಿಚಯ ಮಾಡಿಕೊಂಡ ಖದೀಮನೊಬ್ಬ, ಆತನ ಹೆಸರಿನಲ್ಲಿ 2 ಬ್ಯಾಂಕ್ ಖಾತೆಗಳನ್ನು ತೆರೆದು ತನ್ನ ಅಕ್ರಮ ಕೆಲಸಕ್ಕೆ ಬಳಸಿಕೊಂಡ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಕಲಘಟಗಿ ಮೂಲದ ಮಾಲತೇಶ ಎಂಬುವರಿಗೆ ಇನ್ ಸ್ಟಾಗ್ರಾಮ್ ಮೂಲಕ ದೇವದಾಸ್ ಎಂಬಾತ ಪರಿಚಯವಾಗಿದ್ದ. ಮೇ. 2019ರಲ್ಲಿ ಮೊಬೈಲ್ ಫೋನ್ಗೆ ಕರೆ ಮಾಡಿದ್ದ. ನಾನು ಮತ್ತು ನನ್ನ ಸ್ನೇಹಿತರಿಬ್ಬರು ವಿದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದೇವೆ. ಕಾಲೇಜು ಶುಲ್ಕ ಪಾವತಿಸಲು ಸ್ಥಳೀಯವಾಗಿ ಬ್ಯಾಂಕ್ ಖಾತೆ ತೆರೆಯಲು ಹೇಳಿದ್ದಾರೆ.