ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಸ್ಥಾನಕ್ಕೆ ಹೊಸ ಮೀಸಲಾತಿ ಅಧಿಸೂಚನೆ ಪ್ರಕಟಗೊಂಡಿದ್ದು ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
ಮೇಯರ್ ಹಾಗೂ ಉಪಮೇಯರ್ ಎರಡೂ ಸ್ಥಾನ ಸಾಮಾನ್ಯ ಸ್ಥಾನಕ್ಕೆ ಮೀಸಲಾಗಿವೆ. ಹು-ಧಾ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ 21ನೇ ಅವಧಿಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದೆ.
ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ಮೀಸಲಾತಿಯ ಅಧಿಸೂಚನೆ ಪ್ರಕಟ ಮೇಯರ್ ಹುದ್ದೆ ಸಾಮಾನ್ಯ ಹಾಗೂ ಉಪಮೇಯರ್ ಸಾಮಾನ್ಯ ಮಹಿಳೆಗೆ ನಿಗದಿಯಾಗಿದೆ. ಈ ಹಿಂದೆ 21 ಅಥವಾ 23 ರಲ್ಲಿ ಯಾವ ಅವಧಿಗೆ ಚುನಾವಣೆ ನಡೆಸಬೇಕು ಎಂಬ ಗೊಂದಲ ಇತ್ತು. ಈ ಗೊಂದಲಕ್ಕೆ ರಾಜ್ಯ ಸರ್ಕಾರ ತೆರೆ ಎಳೆದಿದ್ದು, 21 ನೇ ಅವಧಿಗೆ ಮೇಯರ್, ಉಪಮೇಯರ್ ಸ್ಥಾನಕ್ಕೆ ಮೀಸಲಾತಿ ಪ್ರಕಟಿಸಿದೆ. ಬೆಳಗಾವಿ ಪ್ರಾದೇಶಿಕ ಆಯುಕ್ತರು ಚುನಾವಣಾ ದಿನಾಂಕ ನಿಗದಿಪಡಿಸಬೇಕಿದೆ.
ಇದನ್ನೂ ಓದಿ:ಜನ ಹುಚ್ಚ ಅಂತಾ ಹಿಯಾಳಿಸಿದರೂ ಹಿಂಜರಿಯದ ಭೂಪ: ಗದಗದ ಕೃಷಿ ಯಂತ್ರ ಸಾಧಕನಿಗೆ 'ಪದ್ಮಶ್ರೀ' ಗರಿ
ಶೆಟ್ಟರ್, ಬೆಲ್ಲದ ಬಣದಲ್ಲಿ ಸ್ಥಾನಕ್ಕಾಗಿ ಪೈಪೋಟಿ: ಹೊಸ ಮೀಸಲಾತಿ ಪ್ರಕಟಗೊಳ್ಳುತ್ತಿದ್ದಂತೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹಾಗೂ ಅರವಿಂದ ಬೆಲ್ಲದ ಬಣದ ನಡುವೆ ಭಾರಿ ಪೈಪೋಟಿ ನಡೆದಿದೆ. ಈ ಹಿಂದೆ ಮೇಯರ್ ಸ್ಥಾನ ಪ್ರವರ್ಗ 2 ಹಾಗೂ ಉಪಮೇಯರ್ ಸ್ಥಾನ ಎಸ್‌ಸಿ ಮಹಿಳೆ ಮೀಸಲಾಗಿತ್ತು. ಆದ್ರೆ ಈಗ ಹೊಸ ಮೀಸಲಾತಿ ಪ್ರಕಾರ, ಸಮಾನ್ಯ ವರ್ಗಕ್ಕೆ ಮೀಸಲಾತಿ ಪ್ರಕಟಗೊಳ್ಳುತ್ತಿದ್ದಂತೆ ರಾಜಕೀಯ ಚಟುವಟಿಕೆ ಗರಿಗೆದರಿದ್ದು, ಮೇಯರ್ ಉಪಮೇಯರ್ ಸ್ಥಾನ ಗಿಟ್ಟಿಸಿಕೊಳ್ಳಲು ತಮ್ಮ ತಮ್ಮ ನಾಯಕರಿಗೆ ದುಂಬಾಲು ಬೀಳುತ್ತಿದ್ದಾರೆ.
ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ