ಹುಬ್ಬಳ್ಳಿ: ಜಿಲ್ಲಾಧಿಕಾರಿ ದೀಪಾ ಚೋಳನ್ ತಾಲೂಕಿನ ಶಿರಗುಪ್ಪಿ ಹೋಬಳಿಯ ರೈತ ಸಂಪರ್ಕ ಕೇಂದ್ರ ಮತ್ತು ಅಣ್ಣಿಗೇರಿ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹುಬ್ಬಳ್ಳಿ: ರೈತ ಸಂಪರ್ಕ ಕೇಂದ್ರಗಳಿಗೆ ಡಿಸಿ ಭೇಟಿ, ಪರಿಶೀಲನೆ - Hubli latest news
ಶಿರಗುಪ್ಪಿ ಹೋಬಳಿಯ ರೈತ ಸಂಪರ್ಕ ಕೇಂದ್ರ ಮತ್ತು ಅಣ್ಣಿಗೇರಿ ರೈತ ಸಂಪರ್ಕ ಕೇಂದ್ರಕ್ಕೆ ಡಿಸಿ ದೀಪಾ ಚೋಳನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಬೀಜ ವಿತರಿಸುವ ಕಾರ್ಯದಲ್ಲಿ ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸುಗಮ ರೀತಿಯಲ್ಲಿ ಬೀಜ ವಿತರಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶಿಸಿದರು.
Farmer welfare center
ಧಾರವಾಡ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಬಿತ್ತನೆ ಕಾರ್ಯ ಚುರುಕುಗೊಂಡಿದೆ. ಈ ಹಿನ್ನೆಲೆ ಡಿಸಿ ದೀಪಾ ಚೋಳನ್ ಜಿಲ್ಲೆಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿದರು.
ರೈತರಿಗೆ ವಿತರಿಸಲಾಗುತ್ತಿರುವ ಶೇಂಗಾ, ಸೋಯಾಬಿನ್, ಹೆಸರು ಹಾಗೂ ಇತರೆ ಬೀಜಗಳ ಕುರಿತು ಪರಿಶೀಲನೆ ಮಾಡಿ, ಸಂಬಂಧಿಸಿದ ಕೃಷಿ ಅಧಿಕಾರಿಗಳಿಗೆ ಸೂಕ್ತ ಸಲಹೆ ಹಾಗೂ ನಿರ್ದೇಶನಗಳನ್ನು ನೀಡಿದರು. ಜೊತೆಗೆ ಬೀಜ ವಿತರಿಸುವ ಕಾರ್ಯದಲ್ಲಿ ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸುಗಮ ರೀತಿಯಲ್ಲಿ ಬೀಜ ವಿತರಿಸಲು ಸೂಚಿಸಿದರು.