ಹುಬ್ಬಳ್ಳಿ: ಜಗತ್ತನ್ನೇ ತಲ್ಲಣಗೊಳಿಸಿದ ಕಿಲ್ಲರ್ ಮಹಾಮಾರಿ ಕೊರೊನಾ ಎರಡನೇ ಅಲೆಯು ಪ್ರಾರಂಭವಾಗಿರುವ ಬೆನ್ನಲ್ಲೇ ಜಿಲ್ಲಾಡಳಿತ ಸಾಕಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಜರುಗಿಸಿದೆ. ಅಲ್ಲದೇ ಮಹಾನಗರ ಪಾಲಿಕೆ ಕೂಡ ಜನರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿದೆ.
ಕೋವಿಡ್ ನಿಯಂತ್ರಣಕ್ಕೆ ಪಣ ತೊಟ್ಟ ಜಿಲ್ಲಾಡಳಿತ: ಮಾಸ್ಕ್ ಧರಿಸದವರಿಗೆ ಬಿಸಿ ಮುಟ್ಟಿಸುತ್ತಿರುವ ಪಾಲಿಕೆ
ಕೊರೊನಾ ಎರಡನೇ ಅಲೆಯು ಪ್ರಾರಂಭವಾಗಿರುವ ಬೆನ್ನಲ್ಲೇ ಹು - ಧಾ ಮಹಾನಗರ ಪಾಲಿಕೆ ಅಧಿಕಾರಿಗಳು ಸಾಕಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದಾರೆ. ಮಾಸ್ಕ್ ಧರಿಸದೇ ಇರುವವರ ವಿರುದ್ಧ ದಂಡ ವಸೂಲಿಗೆ ಮುಂದಾಗಿದೆ.
ಧಾರವಾಡ ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆಯು ದಿನದಿಂದ ದಿನಕ್ಕೆ ಏರಿಕೆ ಕಂಡಿದ್ದು, ಈಗ ಧಾರವಾಡ ಜಿಲ್ಲಾಡಳಿತ ಕೋವಿಡ್ ವಿರುದ್ಧ ಮತ್ತೊಮ್ಮೆ ಸಮರ ಸಾರಿದೆ. ಅಲ್ಲದೇ ಮಾಸ್ಕ್ ಧರಿಸದೇ ಇರುವವರ ವಿರುದ್ಧ ದಂಡ ವಸೂಲಿಗೆ ಮುಂದಾಗಿದೆ. ಈಗಾಗಲೇ ಜಿಲ್ಲಾಧಿಕಾರಿ ಸ್ಥಳೀಯ ಆಡಳಿತ ಮಂಡಳಿಗೆ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹು-ಧಾ ಮಹಾನಗರ ಪಾಲಿಕೆ ಅಧಿಕಾರಿಗಳು ಮತ್ತೆ ಮಾಸ್ಕ್ ಧರಿಸದವರಿಗೆ ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ.
ಈಗಾಗಲೇ ಹು - ಧಾ ಮಹಾನಗರ ಪಾಲಿಕೆ ಅಧಿಕಾರಿಗಳು ಪೆಟ್ರೋಲ್ ಬಂಕ್, ಹೋಟೆಲ್, ಡಿಪಾರ್ಟ್ಮೆಂಟಲ್ ಸ್ಟೋರ್, ಬಸ್ ನಿಲ್ದಾಣ, ಸಾರ್ವಜನಿಕ ಸಾರಿಗೆ ಸಂಸ್ಥೆ ಬಸ್, ಬಾರ್ ಅಂಡ್ ರೆಸ್ಟೋರೆಂಟ್, ಎಟಿಎಂ ಹಾಗೂ ಶಾಪಿಂಗ್ ಕಾಂಪ್ಲೆಕ್ಸ್ ಗಳಿಗೆ ಭೇಟಿ ನೀಡಿ ಮಾಸ್ಕ್ ಧರಿಸದವರಿಗೆ ಬಿಸಿ ಮುಟ್ಟಿಸುತ್ತಿದ್ದಾರೆ.