ಹುಬ್ಬಳ್ಳಿ: ಹೆಸರು ಬೆಳೆದ ರೈತರ ಸ್ಥಿತಿ ಹಲ್ಲಿದ್ರೆ ಕಡ್ಲೆ ಇಲ್ಲ, ಕಡ್ಲೆ ಇದ್ರೆ ಹಲ್ಲಿಲ್ಲ ಎಂಬಂತಾಗಿದೆ. ಈ ವರ್ಷ ಉತ್ತಮ ಬೆಳೆ ಬಂದಿದೆ. ಆದರೆ, ಸರ್ಕಾರ ಹೆಸರು ಖರೀದಿ ಕೇಂದ್ರ ಇನ್ನೂ ಆರಂಭ ಮಾಡದೆ ಇರೋದು ರೈತರ ಸಂಕಷ್ಟಕ್ಕೆ ಕಾರಣವಾಗಿದೆ.
ಮಳೆಯಿಂದ ಹೆಸರುಕಾಳು ಇಳುವರಿ ಉತ್ತಮ ಕಳೆದೆರಡ್ಮೂರು ವರ್ಷಗಳಿಂದ ಧಾರವಾಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿದ ಮಳೆಯಿಂದಾಗಿ ಹೆಸರು ಬೆಳೆ ನೀರು ಪಾಲಾಗಿ ಅಳಿದುಳಿದ ಬೆಳೆಯನ್ನು ಮಾರಾಟ ಮಾಡಿದ್ದರು. ಅನೇಕರು ಇನ್ಮುಂದೆ ಹೆಸರು ಬೆಳೆಯುವುದೆ ಬೇಡ ಎಂದು ಪರ್ಯಾಯ ಬೆಳೆಯ ಮೊರೆ ಹೋಗಿದ್ದರು.
ಆದರೆ, ಈ ವರ್ಷ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಹೆಸರು ಬೆಳೆದ ರೈತರಿಗೆ ವರದಾನವಾಗಿದೆ. ಇದನ್ನು ಮಾರಾಟ ಮಾಡಲು ರೈತರಿಗೆ ಸಾಧ್ಯವಾಗುತ್ತಿಲ್ಲ. ಸರ್ಕಾರ ಈವರೆಗೆ ಜಿಲ್ಲೆಯಲ್ಲಿ ಹೆಸರು ಖರೀದಿ ಕೇಂದ್ರ ಆರಂಭಿಸಿಲ್ಲ. ಇದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.
ಮಳೆಯಿಂದ ಹೆಸರುಕಾಳು ಇಳುವರಿ ಉತ್ತಮ ಹೊಲದಲ್ಲಿ ಹೆಸರು ರಾಶಿ ಹಾಕಿದ್ದು, ಒಂದಿಷ್ಟು ರೈತರು ಕಟಾವ್ ಮಾಡುತ್ತಿದ್ದಾರೆ. ಮತ್ತೆ ಮಳೆ ಬಂದ್ರೆ ಬೆಳೆ ನೀರು ಪಾಲಾಗಲಿದೆ ಎನ್ನುವ ಆತಂಕ ರೈತರದ್ದಾಗಿದೆ. ಸುಮಾರು 45 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಹೆಸರು ಬೆಳೆಯಲಾಗಿದೆ. ಪ್ರತಿ ಕ್ವಿಂಟಾಲ್ಗೆ 7,000 ರೂ. ಬೆಂಬಲ ಬೆಲೆಯಡಿ ಸರ್ಕಾರ ಖರೀದಿ ಮಾಡಬೇಕಿದೆ. ಆದರೆ, ಈವರೆಗೆ ಸರ್ಕಾರ ಮಾತ್ರ ಹೆಸರು ಖರೀದಿ ಕೇಂದ್ರ ಆರಂಭಿಸಿಲ್ಲ.
ಮಳೆಯಿಂದ ಹೆಸರುಕಾಳು ಇಳುವರಿ ಉತ್ತಮ ಜಿಲ್ಲೆಯ ನವಲಗುಂದ, ಕುಂದಗೋಳ, ಹುಬ್ಬಳ್ಳಿ ಭಾಗದಲ್ಲಿ ಹೆಚ್ಚಾಗಿ ಹೆಸರು ಬೆಳೆದಿದ್ದಾರೆ ರೈತರು. ಈ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡಲಾಗಿದೆ. ಕಳೆದ ವರ್ಷಕ್ಕಿಂತ ಹೆಚ್ಚಿನ ಖರೀದಿ ಕೇಂದ್ರಗಳನ್ನು ಆರಂಭಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಭರವಸೆ ನೀಡಿದ್ದಾರೆ.
ಓದಿ: FIR ದಾಖಲಾಗಿದೆ, ಶೀಘ್ರವೇ ಆರೋಪಿಗಳ ಬಂಧನ: ಪೊಲೀಸ್ ಆಯುಕ್ತ ಚಂದ್ರಗುಪ್ತ