ಧಾರವಾಡ: ಮಹಾನಗರ ಪಾಲಿಕೆ ಸಭಾಭವನದಲ್ಲಿ ಪ್ರಸಕ್ತ ಸಾಲಿನ 'ಪಾಲಿಕೆ ಬಜೆಟ್ ತಯಾರಿ' ಕುರಿತು ಸಾರ್ವಜನಿಕರೊಂದಿಗೆ ಸಮಾಲೋಚನಾ ಸಭೆ ನಡೆಸಲಾಯಿತು.
ಹುಬ್ಬಳ್ಳಿ - ಧಾರವಾಡ ಪಾಲಿಕೆಯಲ್ಲಿ 2021-22ನೇ ಸಾಲಿನ ಬಜೆಟ್ ಸಭೆ: ಮಹತ್ವದ ಚರ್ಚೆ - ಧಾರವಾಡ ಲೇಟೆಸ್ಟ್ ನ್ಯೂಸ್
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯ ಸತ್ತೂರು ಮತ್ತು ನವಲೂರು ವ್ಯಾಪ್ತಿಯಲ್ಲಿ ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ಸಮುದಾಯ ಭವನ ನಿರ್ಮಿಸಲು ಸರ್ಕಾರದಿಂದ ಅನುಮೋದನೆ ಪಡೆದಿದ್ದು, ಶೀಘ್ರವೇ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಪಾಲಿಕೆ ಆಯುಕ್ತ ಡಾ. ಸುರೇಶ್ ಇಟ್ನಾಳ ಹೇಳಿದರು.
ಮಹಾನಗರ ಪಾಲಿಕೆ ಆಯುಕ್ತ ಡಾ. ಸುರೇಶ್ ಇಟ್ನಾಳ, ನಗರದ ಮೂಲ ಸೌಕರ್ಯಗಳ ಅಭಿವೃದ್ಧಿ, ರಸ್ತೆ ಮತ್ತು ಒಳಚರಂಡಿಗಳ, ಸಾರ್ವಜನಿಕ ಸ್ಥಳಗಳ ಸ್ವಚ್ಛತೆ, ಪ್ರಗತಿಯಲ್ಲಿರುವ ರಸ್ತೆ ಕಾಮಗಾರಿಗಳ ಪೂರ್ಣಗೊಳಿಸಲು ಆದ್ಯತೆ, ಪಾಲಿಕೆಯ ವ್ಯಾಪ್ತಿಯಲ್ಲಿ ಬರುವಂತಹ ಬಡಾವಣೆಗಳ ತೆರಿಗೆ ಸಂಗ್ರಹ ಕುರಿತು ಮಾತನಾಡಿದರು.
ಮಹಾನಗರ ಪಾಲಿಕೆ ವ್ಯಾಪ್ತಿಯ ಸತ್ತೂರು ಮತ್ತು ನವಲೂರು ವ್ಯಾಪ್ತಿಯಲ್ಲಿ ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ಸಮುದಾಯ ಭವನವನ್ನು ನಿರ್ಮಿಸಲು ಸರ್ಕಾರದಿಂದ ಅನುಮೋದನೆ ಪಡೆದಿದ್ದು, ಶೀಘ್ರವೇ ಕಾಮಗಾರಿ ಪ್ರಾರಂಭಿಸಲಾಗುವುದು ಎಂದರು. ಸಭೆಯಲ್ಲಿ ಸಾರ್ವಜನಿಕರಿಂದ ಸ್ವೀಕರಿಸಿದ ದೂರು ಮತ್ತು ಸಲಹೆಗಳನ್ನು ಮುಂಬರುವ ಬಜೆಟ್‍ನಲ್ಲಿ ಅಳವಡಿಸುವ ಕುರಿತು ಚರ್ಚಿಸಲಾಗುವುದು ಎಂದರು.