ಕರ್ನಾಟಕ

karnataka

ETV Bharat / state

ಹೊಸ ವರ್ಷಾಚರಣೆ ನಿಮಿತ್ತ ಮಹಿಳೆಯರ ರಕ್ಷಣೆಗೆ ಆದ್ಯತೆ: ಹು-ಧಾ ಪೊಲೀಸ್‌ ಆಯುಕ್ತ - new year day

ಹೊಸ ವರ್ಷಾಚರಣೆಯ ಸಂಭ್ರಮದ ವೇಳೆ ಅವಳಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಆರ್. ದಿಲೀಪ್​ ಹೇಳಿದ್ದಾರೆ.

dharwad police commissioner dileep
ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಆರ್. ದಿಲೀಪ್​

By

Published : Dec 31, 2019, 5:42 PM IST

ಧಾರವಾಡ:ಹೊಸವರ್ಷಾಚರಣೆಯ ಸಂಭ್ರಮದ ವೇಳೆ ಮಹಿಳೆಯರ ರಕ್ಷಣೆಗಾಗಿ ಮೊದಲ ಆದ್ಯತೆ ನೀಡಲಾಗುವುದು. ಈ ನಿಟ್ಟಿನಲ್ಲಿ ಅವಳಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ. 1,500ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ಆರ್. ದಿಲೀಪ್​ ಹೇಳಿದ್ದಾರೆ.

ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಆರ್. ದಿಲೀಪ್​

ಧಾರವಾಡದ ಎಸಿಪಿ‌ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2020 ಹೊಸ ವರ್ಷಾಚರಣೆ ಹಿನ್ನೆಲೆ ಸಕಲ ರೀತಿಯ ಭದ್ರತಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಮಹಿಳೆಯರ ಜೊತೆ ಅಸಭ್ಯ ವರ್ತನೆ ತೋರಿದವರ ವಿರುದ್ಧ ಕಾನೂನು ಕಠಿಣ ಕ್ರಮ ಕೈಗೊಳ್ಳಲಾಗುವುದು. ಹೋಟೆಲ್​ಗಳ ಮೆಲೆ ನಿಗಾ ಇಡಲು ಸೂಚನೆ ನೀಡಲಾಗಿದೆ ಎಂದರು.

ಹೋಟೆಲ್ ಸಿಸಿಟಿವಿ ಸರಿಯಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಿದ್ದೇವೆ. ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಕೆ ಮಾಡಲಾಗಿದೆ. ಯಾರೂ ಕಾನೂನು ಕೈಗೆ ತೆಗೆದುಕೊಳ್ಳಬಾರದು. ಶಾಂತಿಯುತವಾಗಿ ಹೊಸ ವರ್ಷದ ಸಂಭ್ರಮಾಚರಣೆ ಮಾಡಲು ಅವಕಾಶವಿದೆ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ABOUT THE AUTHOR

...view details