ಹುಬ್ಬಳ್ಳಿ: ರಾಜ್ಯದಾದ್ಯಂತ ನಾಳೆ ಎಸ್ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪಾಲಕರು ಯಾವುದೇ ರೀತಿಯ ಭಯ ಪಡುವ ಅಗತ್ಯವಿಲ್ಲವೆಂದು ಹುಬ್ಬಳ್ಳಿ ಶಹರ ಕ್ಷೇತ್ರದ ಶಿಕ್ಷಣಾಧಿಕಾರಿ ಶ್ರೀಶೈಲ ಕರೀಕಟ್ಟಿ ಹೇಳಿದ್ದಾರೆ.
ಕೊರೊನಾ ಬಗ್ಗೆ ಬೇಡ ಭಯ: ಎಸ್ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಿಕ್ಷಣಾಧಿಕಾರಿ ಅಭಯ - Advice by Education Officer for SSLC students
ಕೊರೊನಾ ಭೀತಿ ನಡುವೆಯೂ ತಾಲೂಕಿನಲ್ಲಿ 8573 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಸರ್ಕಾರದ ಆದೇಶ ಹಾಗೂ ಜಿಲ್ಲಾಡಳಿತದ ನಿರ್ದೇಶನದಂತೆ ಪರೀಕ್ಷಾ ಕೇಂದ್ರಗಳಲ್ಲಿ ಪ್ರತಿಯೊಂದು ಕೊಠಡಿಯನ್ನು ಸ್ಯಾನಿಟೈಸ್ ಮಾಡಲಾಗಿದೆ. ವಿದ್ಯಾರ್ಥಿಗಳು ಹಾಗೂ ಪಾಲಕರು ಭಯ ಪಡುವ ಅಗತ್ಯವಿಲ್ಲ. ಕೊರೊನಾ ಭಯ ಬಿಟ್ಟು ಪರೀಕ್ಷೆ ಬರೆಯಬೇಕು ಎಂದು ಹುಬ್ಬಳ್ಳಿ ಶಹರ ಕ್ಷೇತ್ರದ ಶಿಕ್ಷಣಾಧಿಕಾರಿ ಶ್ರೀಶೈಲ ಕರೀಕಟ್ಟಿ ಹೇಳಿದ್ದಾರೆ.
ನಗರದಲ್ಲಿಂದು ಮಾತನಾಡಿದ ಅವರು, ಕೊರೊನಾ ಭೀತಿ ನಡುವೆಯೂ ತಾಲೂಕಿನಲ್ಲಿ 8573 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಸರ್ಕಾರದ ಆದೇಶ ಹಾಗೂ ಜಿಲ್ಲಾಡಳಿತದ ನಿರ್ದೇಶನದಂತೆ ಪರೀಕ್ಷಾ ಕೇಂದ್ರಗಳಲ್ಲಿ ಪ್ರತಿಯೊಂದು ಕೊಠಡಿಯನ್ನು ಸ್ಯಾನಿಟೈಸ್ ಮಾಡಲಾಗಿದೆ. ಒಂದು ಬೆಂಚ್ನಲ್ಲಿ ಓರ್ವ ವಿದ್ಯಾರ್ಥಿ ಪರೀಕ್ಷೆ ಬರೆಯಲಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಗೂ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತೆ ಹಾಗೂ ಸ್ಯಾನಿಟೈಸರ್, ಮಾಸ್ಕ್ ನೀಡಲಾಗುತ್ತೆ ಎಂದರು.
ಅಕಸ್ಮಾತ್ ಯಾರಿಗಾದರೂ ಜ್ವರ, ಕೆಮ್ಮು, ನೆಗಡಿ ಕಂಡು ಬಂದ್ರೆ ಅಂತಹವರಿಗೆ ಬೇರೆ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಕಲ್ಪಿಸಲಾಗುತ್ತೆ ಎಂದರು. ಈಗಾಗಲೇ ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಪ್ರದೇಶಗಳನ್ನು ಡಿಕ್ಲೇರ್ ಮಾಡಲಾಗಿದೆ. ಎಸ್ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಬರುತ್ತಿರುವ ವಿದ್ಯಾರ್ಥಿಗಳು ಹಾಗೂ ಪಾಲಕರು ಭಯ ಪಡುವ ಅಗತ್ಯವಿಲ್ಲ. ಕೊರೊನಾ ಭಯ ಬಿಟ್ಟು ಪರೀಕ್ಷೆ ಬರೆಯಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.