ಹುಬ್ಬಳ್ಳಿ:ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅನುವು ಮಾಡಿಕೊಟ್ಟಿದೆ. ಮೂರು ದಿನಗಳ ಕಾಲ ಹಬ್ಬಾಚರಣೆಗೆ ಅವಕಾಶ ಕಲ್ಪಿಸಲಾಗಿದೆ.
ಹುಬ್ಬಳ್ಳಿ ಈದ್ಗಾ ಮೈದಾನ: ಮೂರು ದಿನ ಗಣೇಶೋತ್ಸವ ಆಚರಣೆಗೆ ಅವಕಾಶ - ಗಣೇಶೋತ್ಸವ ಆಚರಣೆಗೆ ಅವಕಾಶ
ಈದ್ಗಾ ಮೈದಾನದಲ್ಲಿ ಮೂರು ದಿನಗಳ ಕಾಲ ಗಣೇಶೋತ್ಸವ ಆಚರಣೆಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ಅವಕಾಶ ಮಾಡಿಕೊಡಲಾಗಿದೆ.
ಹುಬ್ಬಳ್ಳಿ ಈದ್ಗಾ ಮೈದಾನ
ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡುವಂತೆ ಒಟ್ಟು 6 ಹಿಂದೂಪರ ಸಂಘಟನೆಗಳಿಂದ ಮನವಿ ಸಲ್ಲಿಸಲಾಗಿತ್ತು. ಹಾಗಾಗಿ ಸಮಿತಿ ರಚನೆ ಮಾಡಲಾಗಿತ್ತು. ಈ ಸಮಿತಿ ಅವಕಾಶ ನೀಡುವಂತೆ ವರದಿ ನೀಡಿದೆ. ಈ ಹಿನ್ನೆಲೆಯಲ್ಲಿ ಒಟ್ಟು ಮೂರು ದಿನಗಳ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ನೀಡಲಾಗಿದೆ ಎಂದು ಪಾಲಿಕೆ ಮೇಯರ್ ಈರೇಶ ಅಂಚಟಗೇರಿ ಹೇಳಿದರು.
ಇದನ್ನೂ ಓದಿ:ಸದನ ಸಮಿತಿ ವರದಿ ಬಂದ ಬಳಿಕ ಮುಂದಿನ ನಿರ್ಧಾರ: ಸಚಿವ ಜೋಶಿ
Last Updated : Aug 30, 2022, 1:21 PM IST