ಕರ್ನಾಟಕ

karnataka

ETV Bharat / state

ಶಿಕ್ಷಣ ಇಲಾಖೆ ಸುತ್ತೋಲೆ ಖಂಡಿಸಿ ಪ್ರತಿಭಟನೆ - ಶಿಕ್ಷಣ ಇಲಾಖೆ ಹೇಳಿಕೆ ಖಂಡಿಸಿ ಹುಬ್ಬಳ್ಳಿ ಜೈ ಭೀಮ ಸಂಘಟನೆ ಪ್ರತಿಭಟನೆ

ಶಿಕ್ಷಣ ಇಲಾಖೆಯ ಸುತ್ತೋಲೆಯ ಕೈಪಿಡಿಯಲ್ಲಿ ಅಂಬೇಡ್ಕರ್ ಸಂವಿಧಾನ ರಚನೆ ಮಾಡಿಲ್ಲ ಎಂದು ಹೇಳುವುದು ಸರಿಯಲ್ಲ. ಇಂತಹ ವಿವಾದಾತ್ಮಕ ನಿರ್ಧಾರವನ್ನು ಕೈ ಬಿಟ್ಟು ಕೂಡಲೇ ಅಧಿಕಾರಿಗಳನ್ನು ವಜಾಗೊಳಿಸಬೇಕೆಂದು ಆಗ್ರಹಿಸಿ ಜೈ ಭೀಮ ‌ಅಖಿಲ ಭಾರತ ದಲಿತ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಶಿಕ್ಷಣ ಇಲಾಖೆ ಹೇಳಿಕೆ ಖಂಡಿಸಿ ಪ್ರತಿಭಟನೆ

By

Published : Nov 16, 2019, 2:05 PM IST

ಹುಬ್ಬಳ್ಳಿ:ಶಿಕ್ಷಣ ಇಲಾಖೆಯ ಸುತ್ತೋಲೆಯ ಕೈಪಿಡಿಯಲ್ಲಿ ಅಂಬೇಡ್ಕರ್ ಸಂವಿಧಾನ ರಚನೆ ಮಾಡಿಲ್ಲ ಎಂದು ಹೇಳುವುದು ಸರಿಯಲ್ಲ. ಇಂತಹ ವಿವಾದಾತ್ಮಕ ನಿರ್ಧಾರವನ್ನು ಕೈ ಬಿಟ್ಟು ಕೂಡಲೇ ಅಧಿಕಾರಿಗಳನ್ನು ವಜಾಗೊಳಿಸಬೇಕೆಂದು ಆಗ್ರಹಿಸಿ ಜೈ ಭೀಮ ‌ಅಖಿಲ ಭಾರತ ದಲಿತ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಶಿಕ್ಷಣ ಇಲಾಖೆ ಸುತ್ತೋಲೆ ಖಂಡಿಸಿ ಪ್ರತಿಭಟನೆ

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಸಂವಿಧಾನ ರಚನೆ ಮಾಡಿಲ್ಲ ಎಂದು ಹೇಳುವುದು ದೇಶದ ಪ್ರಜಾಪ್ರಭುತ್ವಕ್ಕೆ ಹಾಗೂ ದೇಶದ ಪವಿತ್ರ ಸಂವಿಧಾನಕ್ಕೆ ಮಾಡುವ ಅಪಮಾನವಾಗಿದೆ. ಅಲ್ಲದೇ ಶಿಕ್ಷಣ ಇಲಾಖೆಯ ಸುತ್ತೋಲೆಯ ಕೈಪಿಡಿಯಲ್ಲಿ ಅಂಬೇಡ್ಕರ್ ಅವರು ಸಂವಿಧಾನ ರಚನೆ ಮಾಡಿಲ್ಲ ಎಂದು ಹೇಳುವುದು ಸರಿಯಲ್ಲ. ಇಂತಹ ವಿವಾದಾತ್ಮಕ ನಿರ್ಧಾರವನ್ನು ಕೈ ಬಿಟ್ಟು ಕೂಡಲೇ ಅಧಿಕಾರಿಗಳನ್ನು ವಜಾಗೊಳಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿ, ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

For All Latest Updates

TAGGED:

ABOUT THE AUTHOR

...view details