ಹುಬ್ಬಳ್ಳಿ:ಉತ್ತರ ಕರ್ನಾಟಕದ ಸಂಜೀವಿನಿ ಎಂದೇ ಖ್ಯಾತಿಯಾಗಿರುವ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಈಗ ರಾಜ್ಯದಲ್ಲಿ ಅತಿ ಹೆಚ್ಚು ಆಕ್ಸಿಜನ್ ಸಂಗ್ರಹ ಸಾಮರ್ಥ್ಯವಿರುವ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಹೌದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ 5 ದಿನಗಳ ಹಿಂದೆ 20 ಕಿಲೋ ಲೀಟರ್ ಎಂಎಲ್ಒ ಟ್ಯಾಂಕ್ ಅಳವಡಿಕೆ ಕಾರ್ಯ ಪೂರ್ಣಗೊಂಡಿದೆ. ಈ ಮೂಲಕ ಒಟ್ಟಾರೆ 40 ಕೆಎಲ್ ಆಕ್ಸಿಜನ್ ಟ್ಯಾಂಕ್ ಹೊಂದಿದೆ. ಈಗಾಗಲೇ ಕಿಮ್ಸ್ನಲ್ಲಿ ಕೇಂದ್ರೀಕೃತ ಆಕ್ಸಿಜನ್ ಪೂರೈಕೆ ವ್ಯವಸ್ಥೆ ಇದ್ದು, ಇದಕ್ಕೆ ಅನುಗುಣವಾಗಿ 50 ಲಕ್ಷ ಮೊತ್ತದ ಹೆಚ್ಚುವರಿ 20 ಕಿಲೋ ಲೀಟರ್ ಎಂಎಲ್ಒ ಟ್ಯಾಂಕ್ ಅಳವಡಿಕೆಯಾಗಿದೆ. ಐನಾಕ್ಸ್ ಕಂಪನಿ ಇಲ್ಲಿ ಆಕ್ಸಿಜನ್ ಟ್ಯಾಂಕ್ ಅಳವಡಿಕೆ ಮಾಡಿದ್ದು, ಸುರಕ್ಷತೆ ಕುರಿತಂತೆ ಚೆನ್ನೈನ ಅಧಿಕಾರಿಗಳು ಪರಿಶೀಲನೆ ನಡೆಸಿ ಒಪ್ಪಿಗೆ ನೀಡಿದ್ದಾರೆ ಎಂದು ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ತಿಳಿಸಿದ್ದಾರೆ.