ಕರ್ನಾಟಕ

karnataka

By

Published : Aug 2, 2020, 10:59 AM IST

ETV Bharat / state

ಕೊರೊನಾ ವಾರಿಯರ್ಸ್​ಗೆ ಇದೆಂಥ ದುಸ್ಥಿತಿ... ಹರಿದ ಪಿಪಿಇ ಕಿಟ್ ಧರಿಸಿ ಕರ್ತವ್ಯ ನಿರ್ವಹಿಸುತ್ತಿರುವ ಕಿಮ್ಸ್ ಸಿಬ್ಬಂದಿ

ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಗೆ ನೀಡಲಾದ ಪಿಪಿಇ ಕಿಟ್‌ಗಳು ಹರಿದು ಹೋಗಿದ್ದು, ಉತ್ತಮ ಗುಣಮಟ್ಟದ ಕಿಟ್ ನೀಡಿಲ್ಲವೆಂಬ ಆರೋಪ ಕೇಳಿಬಂದಿದೆ.

Ppe kit
Ppe kit

ಹುಬ್ಬಳ್ಳಿ: ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಜೀವದ ಹಂಗು ತೊರೆದು ಕಿಮ್ಸ್ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯಕೀಯ ಸಿಬ್ಬಂದಿಗೆ ದೋಷಪೂರಿತ ಸುರಕ್ಷತಾ ಕಿಟ್‌ ನೀಡಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ.

ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವ ವೈದ್ಯರು ಗುಣಮಟ್ಟದ ವೈಯಕ್ತಿಕ ಸುರಕ್ಷಾ ಸಾಧನ (ಪಿಪಿಇ ಕಿಟ್‌), ಎನ್‌ 95 ಮಾಸ್ಕ್‌ ಧರಿಸಬೇಕು. ಆದರೆ ಕಿಮ್ಸ್‌ನ ಕೆಲ ಸಿಬ್ಬಂದಿಗೆ ನೀಡಲಾದ ಪಿಪಿಇ ಕಿಟ್‌ಗಳು ಹರಿದು ಹೋಗಿವೆ. ಕೋವಿಡ್‌ ವಾರ್ಡ್‌ನ ಐಸಿಯು ಘಟಕದಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಮಾತ್ರ ಗುಣಮಟ್ಟದ ಕಿಟ್‌ಗಳನ್ನು ನೀಡಲಾಗಿದೆ ಎನ್ನಲಾಗಿದೆ.

ಸಾಮಾನ್ಯ ವಾರ್ಡ್‌ಗಳಲ್ಲಿ ಕೆಲಸ ಮಾಡುತ್ತಿರುವ ವೈದ್ಯರಿಗೆ, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಮತ್ತು ಶುಶ್ರೂಷಕರಿಗೆ ಎರಡು, ಮೂರನೇ ದರ್ಜೆಯ ಸುರಕ್ಷತಾ ಕಿಟ್‌ಗಳನ್ನು ನೀಡಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ಹಾಗಾಗಿ ಹರಿದ ಪಿಪಿಇ ಕಿಟ್‌ಗಳು, ಮಧ್ಯದಲ್ಲಿ ಕಿಂಡಿ ಬಿದ್ದಿರುವ ಮಾಸ್ಕ್‌ಗಳ ಚಿತ್ರಗಳನ್ನು ಕಿಮ್ಸ್‌ ವೈದ್ಯಕೀಯ ವಿದ್ಯಾರ್ಥಿಗಳೇ ಬಹಿರಂಗಪಡಿಸಿದ್ದಾರೆ.‌

ABOUT THE AUTHOR

...view details