ಹುಬ್ಬಳ್ಳಿ: ಹುಬ್ಬಳ್ಳಿಯ ವ್ಯಕ್ತಿಯೊಬ್ಬರು ಕೊಲ್ಲಾಪುರಕ್ಕೆ ಹೋದ ಸಂದರ್ಭದಲ್ಲಿ ಲಾಡ್ಜ್ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಬೆಳಕಿಗೆ ಬಂದಿದೆ.
ಅಯ್ಯಪ್ಪ ಮಾಲಾಧಾರಿಗಳಿಗೆ ಗುರುವಾಗಿದ್ದ ವೀರಾಪೂರ ಓಣಿಯ ನಿವಾಸಿ ರವಿ ಹೋತಪೇಟೆ ಆತ್ಮಹತ್ಯೆ ಮಾಡಿಕೊಂಡವರು. ಇವರು ಗೊಂಬೆಗಳಿಗೆ ಆಭರಣಗಳನ್ನು ಪೂರೈಸುತ್ತಿದ್ದರು. ಆಭರಣಗಳನ್ನು ತರುವುದಾಗಿ ಕೊಲ್ಲಾಪುರಕ್ಕೆ ಹೋಗಿದ್ದರು. ಇದೇ ಸಮಯದಲ್ಲಿ ತಂಗಿದ್ದ ಲಾಡ್ಜ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.