ಹುಬ್ಬಳ್ಳಿ:ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿ-ಧಾರವಾಡ ಶರವೇಗದಲ್ಲಿ ಬೆಳೆಯುತ್ತಿದೆ. ಅಲ್ಲದೇ ಈ ಭಾಗದವರೇ ಸಿಎಂ ಆಗಿರುವುದರಿಂದ ಈ ಬಾರಿಯ ಬಜೆಟ್ ಮೇಲೆ ಜನರು ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.
ದಿನೇ ದಿನೇ ಶರವೇಗದಲ್ಲಿ ಬೆಳೆಯುತ್ತಿರುವ ವಾಣಿಜ್ಯನಗರಿಯಲ್ಲಿ ವಾಹನ ಹಾಗೂ ಜನದಟ್ಟಣೆಯೂ ವಿಪರೀತವಾಗಿ ಏರಿಕೆಯಾಗುತ್ತಿದೆ. ಇದರ ಪರಿಣಾಮ ನಿತ್ಯ ಜನರು ಟ್ರಾಫಿಕ್ ಕಿರಿಕಿರಿ, ಪಾರ್ಕಿಂಗ್ ಸಮಸ್ಯೆ ಎದುರಿಸುತ್ತಿದ್ದಾರೆ. ಇಕ್ಕಟ್ಟಾದ ರಸ್ತೆಗಳನ್ನು 9 ಮೀಟರ್‌ನಿಂದ 12 ಮೀಟರ್ವರೆಗೆ ವಿಸ್ತರಿಸಲು ಅವಕಾಶವಿದೆ. ಆದರೆ, ಇದಿಷ್ಟೇ ಮಾಡಿದರೆ ಸಾಲುವುದಿಲ್ಲ. ಮುಂದಿನ 50 ವರ್ಷಗಳನ್ನು ಗಮನದಲ್ಲಿಟ್ಟುಕೊಂಡು ಯೋಜನೆ ರೂಪಿಸುವ ಅವಶ್ಯಕತೆಯಿದೆ. ಹಾಗಿದ್ದರೆ ಮೂಲಭೂತ ಸೌಕರ್ಯಗಳ ಸಮಸ್ಯೆ ಈ ಬಜೆಟ್ನಲ್ಲಿ ಬಗೆಹರಿಯಲಿದೆಯೇ ಎಂಬುವುದು ಸಾರ್ವಜನಿಕರ ಪ್ರಶ್ನೆಯಾಗಿದೆ. ಆದರೆ ಇದಕ್ಕೆ ಸಿಎಂ ಮಾತ್ರ ಕಾದು ನೋಡಬೇಕು ಎಂದಿದ್ದಾರೆ.