ಹುಬ್ಬಳ್ಳಿ:ಮಹಾನಗರ ಪಾಲಿಕೆ ಚುನಾವಣೆ ಕಾವು ಹೆಚ್ಚಾಗುತ್ತಿದ್ದು, ಈ ಮಧ್ಯೆ ಮತದಾರರನ್ನು ಸೆಳೆಯಲು ಪ್ರಮುಖ ಪಕ್ಷಗಳು ಹಣ ಹಂಚಿಕೆ ಮಾಡುತ್ತಿವೆ ಎಂಬ ಆರೋಪಕ್ಕೆ ಪುರಾವೆ ಸಿಕ್ಕಿದೆ.
ಪೊಲೀಸರು ವಶಕ್ಕೆ ಪಡೆದಿರುವ ಕಾರು ನಿನ್ನೆ ರಾತ್ರಿ ಕುಸುಗಲ್ ರಸ್ತೆಯ ಆಕ್ಸ್ಫರ್ಡ್ ಕಾಲೇಜಿನ ಬಳಿ ಬಾಗಲಕೋಟೆಯಿಂದ ಹುಬ್ಬಳ್ಳಿಗೆ ಬರುತ್ತಿದ್ದ ಕಾರಿನಲ್ಲಿ ಅಕ್ರಮವಾಗಿ ಹಣ ಸಾಗಾಟ ನಡೆಸಲಾಗುತ್ತಿತ್ತು. ಈ ಕುರಿತಂತೆ ಖಚಿತ ಮಾಹಿತಿ ಪಡೆದ ಕೇಶ್ವಾಪುರ ಠಾಣೆ ಪೊಲೀಸರು, ಕಾರನ್ನು ತಡೆದು ತಪಾಸಣೆ ನಡೆಸಿದ್ದರು.
ಈ ವೇಳೆ ಕಾರಿನಲ್ಲಿದ್ದ ಸುಮಾರು 82.75 ಲಕ್ಷ ರೂ. ಹಣವನ್ನು ಪೊಲೀಸರು ಜಪ್ತಿ ಮಾಡಿದ್ದು, ಕಾರು ಚಾಲಕ ಗೋಕುಲರಾಮ ವೀರಾಮಾರಾಮ ರಬಾರಿ(34) ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಚಾಲಕ ಮೂಲತಃ ರಾಜಸ್ಥಾನದವನಾಗಿದ್ದು, ಸದ್ಯ ಬಾಗಲಕೋಟೆಯಲ್ಲಿ ವಾಸವಾಗಿದ್ದಾನೆ.
ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಸಂದರ್ಭದಲ್ಲೇ ಭಾರಿ ಹಣ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಓದಿ: Mysuru Gang Rape: ಮುಂಬೈಗೆ ತೆರಳಿದ ಸಂತ್ರಸ್ತೆಗೆ ಆರೋಪಿಗಳ ಫೋಟೋ ಕಳಿಸಿ ಖಚಿತಪಡಿಸಿಕೊಂಡ ಪೊಲೀಸರು!