ಹುಬ್ಬಳ್ಳಿ:ಇತ್ತೀಚೆಗೆ ನಡೆದಗಲಭೆ ಪ್ರಕರಣದಲ್ಲಿ ಇಲ್ಲಿಯವರೆಗೆ 104 ಜನರನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಆರು ಜನ ಅಪರಾಧ ಹಿನ್ನೆಲೆಯುಳ್ಳವರಾಗಿದ್ದು, ಮೂವರು ಅಪ್ರಾಪ್ತರಿದ್ದಾರೆ. ಬಂಧಿತ ಗಲಭೆಕೋರರ ಹಿನ್ನೆಲೆ ಕೆದಕಲು ವಿಶೇಷ ಪೊಲೀಸ್ ತನಿಖಾ ತಂಡ ಕಾರ್ಯಾಚರಣೆ ನಡೆಸುತ್ತಿದೆ.
ಹುಬ್ಬಳ್ಳಿ ಗಲಭೆ: ಬಂಧಿತರಲ್ಲಿ 6 ಮಂದಿ ಕ್ರಿಮಿನಲ್ಸ್, ಮೂವರು ಅಪ್ರಾಪ್ತರು
ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಇಲ್ಲಿಯವರೆಗೆ ಬಂಧಿಸಲ್ಪಟ್ಟವರಲ್ಲಿ ಆರು ಜನ ಕ್ರಿಮಿನಲ್ ಹಿನ್ನೆಲೆ ಹೊಂದಿದ್ದು, ಮೂವರು ಅಪ್ರಾಪ್ತರಾಗಿದ್ದಾರೆ.
ಹುಬ್ಬಳ್ಳಿ ಗಲಭೆ ಪ್ರಕರಣ
ಬಂಧಿತರಲ್ಲಿ ರೌಡಿಶೀಟರ್ಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ತಿಳಿದುಬಂದಿದೆ. ಹುಬ್ಬಳ್ಳಿ-ಧಾರವಾಡದ ಆಯಾ ಪೊಲೀಸ್ ಠಾಣೆಗಳ ವ್ಯಾಪ್ತಿಯ ರೌಡಿಶೀಟರ್ಗಳ ಮಾಹಿತಿ ಪಡೆಯಲಾಗುತ್ತಿದೆ. ಇಲ್ಲಿಯವರೆಗೂ ಬಂಧಿತರಾದವರಲ್ಲಿ ಬೈಕ್ ಕಳ್ಳತನ, ಮೊಬೈಲ್ ಕಳ್ಳತನ, ಮನೆಗಳ್ಳತನ.. ಹೀಗೆ ಅನೇಕ ಪ್ರಕರಣಗಳಲ್ಲಿ ಭಾಗಿಯಾದವರೇ ಸೇರಿದ್ದಾರೆ. ಪೊಲೀಸರು ಆರೋಪಿಗಳನ್ನು ಕರೆತರುತ್ತಿದ್ದಂತೆಯೇ ಅವರ ಕುಟುಂಬಸ್ಥರು ಠಾಣೆಯೆದುರು ಕಣ್ಣೀರು ಹಾಕುತ್ತಿದ್ದಾರೆ.
ಇದನ್ನೂ ಓದಿ:ಹುಬ್ಬಳ್ಳಿ ಪ್ರಕರಣದಲ್ಲಿ ವಿಡಿಯೋ, ಸಾಕ್ಷಿಗಳ ಆಧಾರದಲ್ಲಿ ತನಿಖೆ ನಡೆಯುತ್ತಿದೆ : ಸಿಎಂ ಬೊಮ್ಮಾಯಿ