ಧಾರವಾಡ:ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿಗಳ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್ ತಿರಸ್ಕರಿಸಿದೆ. ಏಪ್ರಿಲ್ 16ರಂದು ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ಎದುರು ಭಾರಿ ಗಲಾಟೆ, ಕಲ್ಲು ತೂರಾಟ ನಡೆದಿತ್ತು.
ಹುಬ್ಬಳ್ಳಿ ಗಲಭೆ ಪ್ರಕರಣ: ಆರೋಪಿಗಳ ಜಾಮೀನು ಅರ್ಜಿ ತಿರಸ್ಕರಿಸಿದ ಧಾರವಾಡ ಹೈಕೋರ್ಟ್ - ಆರೋಪಿಗಳ ಜಾಮೀನು ಅರ್ಜಿ ತಿರಸ್ಕರಿಸಿದ ಧಾರವಾಡ ಹೈಕೋರ್ಟ್
ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಇಂದು ನಡೆದಿದ್ದು, ಧಾರವಾಡ ಹೈಕೋರ್ಟ್ ಪೀಠ ಅರ್ಜಿಯನ್ನು ತಿರಸ್ಕರಿಸಿದೆ.
ಧಾರವಾಡ ಹೈಕೋರ್ಟ್
ಪೊಲೀಸ್ ವಾಹನ ಹಾಗೂ ಪೊಲೀಸರ ಮೇಲೆ ನಡೆದಿದ್ದ ಕಲ್ಲು ತೂರಾಟ ಪ್ರಕರಣದಲ್ಲಿ 156 ಜನರನ್ನು ಬಂಧಿಸಲಾಗಿತ್ತು. ಬಂಧಿತರ ಪೈಕಿ ಈಗಾಗಲೇ 8 ಜನ ಜಾಮೀನು ಪಡೆದಿದ್ದಾರೆ. ಇವತ್ತು ಉಳಿದವರ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ಅವರ ಜಾಮೀನು ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ.
ಇದನ್ನೂ ಓದಿ:ಹುಬ್ಬಳ್ಳಿ ಗಲಭೆ ಪ್ರಕರಣ: ಏಳು ಮಂದಿಗೆ ಷರತ್ತು ಬದ್ಧ ಜಾಮೀನು