ಹುಬ್ಬಳ್ಳಿ: ನಗರದ ಕೆ.ಎಲ್.ಇಂಜಿನಿಯರಿಂಗ್ ಕಾಲೇಜಿನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಕಾಶ್ಮೀರಿ ವಿದ್ಯಾರ್ಥಿಗಳ ಜಾಮೀನು ಪ್ರಕರಣದಲ್ಲಿ ಕರ್ತವ್ಯ ಲೋಪವೆಸಗಿದ ಇನ್ಸ್ಪೆಕ್ಟರ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಪಾಕ್ ಪರ ಘೋಷಣೆ ಕೇಸ್‌ನಲ್ಲಿ ಕರ್ತವ್ಯ ಲೋಪ: ಹುಬ್ಬಳ್ಳಿ ಗ್ರಾಮೀಣ ಠಾಣೆ ಇನ್ಸ್ಪೆಕ್ಟರ್ ಸಸ್ಪೆಂಡ್ - Hubli inspector suspend news
ಪಾಕ್ ಪರ ಘೋಷಣೆ ಕೂಗಿದ್ದ ಕಾಶ್ಮೀರಿ ವಿದ್ಯಾರ್ಥಿಗಳ ಜಾಮೀನು ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಅಮಾನತುಗೊಂಡಿದ್ದಾರೆ.
Inspector
ಉತ್ತರ ವಲಯದ ಐಜಿಪಿ ರಾಘವೇಂದ್ರ ಸುಹಾಸ್, ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್ಸ್ಪೆಕ್ಟರ್ ಜಾಕ್ಸನ್ ಡಿಸೋಜಾ ಅವರನ್ನು ಸಸ್ಪೆಂಡ್ ಮಾಡಿದ್ದಾರೆ.
ಅಮಾನತು ಶಿಕ್ಷೆ ಏಕೆ?:90 ದಿನಗಳೊಳಗೆ ಪ್ರಕರಣದ ಜಾರ್ಜ್‌ಶೀಟ್ ಸಲ್ಲಿಸದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ 2 ನೇ ಜೆಎಂಎಫ್‌ಸಿ ನ್ಯಾಯಾಲಯದಿಂದ ಆರೋಪಿಗಳಿಗೆ ಜಾಮೀನು ಸಿಕ್ಕಿತ್ತು. ಹೀಗಾಗಿ ಪ್ರಕರಣದಲ್ಲಿ ಹುಬ್ಬಳ್ಳಿಯ ಗ್ರಾಮೀಣ ಠಾಣೆ ಪೊಲೀಸರ ನಿರ್ಲಕ್ಷ್ಯ ಕಂಡು ಬಂದಿತ್ತು. ಆದ್ದರಿಂದ ಕರ್ತವ್ಯ ಲೋಪ, ನಿರ್ಲಕ್ಷ್ಯತನದ ಗಂಭೀರ ಸ್ವರೂಪದ ಆರೋಪದಡಿ ಪೊಲೀಸ್ ಅಧಿಕಾರಿ ಅಮಾನತು ಶಿಕ್ಷೆಗೆ ಒಳಗಾಗಿದ್ದಾರೆ.