ಹುಬ್ಬಳ್ಳಿ:ಉತ್ತರ ಕರ್ನಾಟಕದ ಪ್ರಖ್ಯಾತ ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಮಠದ ಆವರಣದಲ್ಲಿ ನಡೆಯಬೇಕಿದ್ದ ಲಕ್ಷ ದೀಪೋತ್ಸವ ರದ್ದಾಗಿದೆ.
ಕೊರೊನಾ ಹರಡುವ ಭೀತಿ ಹಿನ್ನೆಲೆಯಲ್ಲಿ ಲಕ್ಷ ದೀಪೋತ್ಸವ ಕಾರ್ಯಕ್ರಮವನ್ನು ಸಿದ್ಧಾರೂಢ ಟ್ರಸ್ಟ್ ಕಮಿಟಿ ರದ್ದು ಮಾಡಿದೆ. ಪ್ರತಿವರ್ಷ ಸಾವಿರಾರು ಭಕ್ತರು ಲಕ್ಷ ದೀಪೋತ್ಸವ ಆಚರಿಸುತ್ತ ಬಂದಿದ್ದರು.