ಹುಬ್ಬಳ್ಳಿ: ಲಾಕ್ಡೌನ್ ಸಡಿಲಿಕೆಯಾದರೂ ನಗರದಲ್ಲಿ ಬೀದಿ ಬದಿ ವ್ಯಾಪಾರವನ್ನೇ ನಂಬಿಕೊಂಡು ಜೀವನ ನಡೆಸುತ್ತಿದ್ದ ಕುಟುಂಬಗಳು ದಿನವಿಡೀ ವ್ಯಾಪಾರ-ವಹಿವಾಟು ಇಲ್ಲದೆ ಕಂಗಾಲಾಗಿವೆ.
ಹುಬ್ಬಳ್ಳಿ: ಗ್ರಾಹಕರಿಲ್ಲದೆ ಕಂಗಾಲಾದ ಬೀದಿ ಬದಿ ವ್ಯಾಪಾರಿಗಳು
ಲಾಕ್ ಡೌನ್ ಸಡಿಲಿಕೆ ಮಾಡಿದ್ದು, ಸರ್ಕಾರದ ನಿಯಮಗಳನ್ನು ಪಾಲಿಸಿ ವ್ಯಾಪಾರ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಆದರೂ ಸಹಿತ ಜನರು ಕೊರೊನಾ ಹರಡುವ ಭೀತಿ ಹಿನ್ನೆಲೆ ಮನೆಯಿಂದ ಹೊರ ಬರಲು ಜನರು ಹಿಂದೇಟು ಹಾಕುತ್ತಿದ್ದಾರೆ. ಇದರಿಂದಾಗಿ ಬೀದಿ ಬದಿ ವ್ಯಾಪಾರವನ್ನೇ ನಂಬಿಕೊಂಡು ಜೀವನ ನಡೆಸುತ್ತಿದ್ದ ಕುಟುಂಬಗಳು ಕಂಗಾಲಾಗಿವೆ.
ಆರಂಭದಲ್ಲಿ ಲಾಕ್ಡೌನ್ ಹಿನ್ನೆಲೆ ಎಲ್ಲಾ ವ್ಯಾಪಾರ ವಹಿವಾಟು ಬಂದ್ ಆಗಿದ್ದವು. ಆದರೆ ಇದೀಗ ಲಾಕ್ ಡೌನ್ ಸಡಿಲಿಕೆ ಮಾಡಿದ್ದು, ಸರ್ಕಾರದ ನಿಯಮಗಳನ್ನು ಪಾಲಿಸಿ ವ್ಯಾಪಾರ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಆದರೂ ಸಹಿತ ಜನರು ಕೊರೊನಾ ಹರಡುವ ಭೀತಿ ಹಿನ್ನೆಲೆ ಮನೆಯಿಂದ ಹೊರಬರಲು ಜನರು ಹಿಂದೇಟು ಹಾಕುತ್ತಿದ್ದಾರೆ. ಪರಿಣಾಮ ಬೀದಿ ಬದಿಯಲ್ಲಿ ಹಣ್ಣು, ಬಟ್ಟೆ, ಸಣ್ಣಪುಟ್ಟ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಗಳು ಈಗ ಸಂಕಷ್ಟ ಎದುರಿಸುತ್ತಿದ್ದಾರೆ.
ಕೊರೊನಾ ಬರುವ ಮುನ್ನ ದಿನಕ್ಕೆ 300 ರೂ.ಯಿಂದ 500 ರೂಪಾಯಿ ವ್ಯಾಪಾರ ನಡೆಯುತ್ತಿತ್ತು. ಈಗ ದಿನವಿಡೀ ವ್ಯಾಪಾರ ಮಾಡಿದ್ರು ಸಹ ನೂರರಿಂದ ಎರಡನೂರು ರೂಪಾಯಿ ವ್ಯಾಪಾರ ನಡೆಯುತ್ತಿಲ್ಲ. ಹೀಗಾಗಿ ಜೀವನ ನಿರ್ವಹಣೆ ಕಷ್ಟವಾಗಿದೆ ಎಂದು ಬೀದಿ ಬದಿಯ ವ್ಯಾಪಾರಸ್ಥರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.