ಕರ್ನಾಟಕ

karnataka

ETV Bharat / state

ಕಾನೂನು ವಿವಿ ಸೆಮಿಸ್ಟರ್ ಉತ್ತೀರ್ಣ ಮಾನದಂಡಕ್ಕೆ ವಿದ್ಯಾರ್ಥಿಗಳ ಆಕ್ಷೇಪ

ಕೋವಿಡ್ ನಿಯಮದ ಹಿನ್ನೆಲೆಯಲ್ಲಿ ಬಹುತೇಕ ತರಗತಿಗಳಿಗೆ ಪರೀಕ್ಷೆ ನಡೆಸದೇ ಹಿಂದಿನ ಫಲಿತಾಂಶದ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲಾಗಿದೆ. ಆದರೆ ಕೆಲವು ವಿದ್ಯಾರ್ಥಿಗಳು, ಈ ನಿರ್ಧಾರದಲ್ಲಿ ಅನ್ಯಾಯವಾಗಿದೆ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.

hubli
ಳಲು ತೋಡಿಕೊಂಡ ವಿದ್ಯಾರ್ಥಿಗಳು

By

Published : Jul 8, 2021, 2:48 PM IST

ಹುಬ್ಬಳ್ಳಿ: ಇಲ್ಲಿರುವವರು ಕಾನೂನು ವಿಭಾಗದಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು. ಕಾನೂನು ಪದವಿಯ ಬಳಿಕ ಜನರಿಗೆ ನ್ಯಾಯ ಒದಗಿಸಿಕೊಡುವ ಹುಮ್ಮಸ್ಸಿನಲ್ಲಿದ್ದವರು. ಆದರೆ ಈ ವಿದ್ಯಾರ್ಥಿಗಳೇ ಇಂದು ಫಲಿತಾಂಶದ ವಿಷಯದಲ್ಲಿ ಅನ್ಯಾಯವಾಗಿದೆ ಎಂದು ಹೇಳುತ್ತಿದ್ದಾರೆ.

ಅಳಲು ತೋಡಿಕೊಂಡ ವಿದ್ಯಾರ್ಥಿಗಳು

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಸಕ್ರಿ ಲಾ ಕಾಲೇಜು, ಕೆಎಲ್ಇ ಲಾ ಕಾಲೇಜು ಹಾಗೂ ಹುರಕಡ್ಲಿ ಸೇರಿದಂತೆ ಇನ್ನಿತರ ಕಾಲೇಜಿನಲ್ಲಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಕೋವಿಡ್ ನಿಯಮದ ಹಿನ್ನೆಲೆಯಲ್ಲಿ ಬಹುತೇಕ ತರಗತಿಗಳನ್ನು ಪರೀಕ್ಷೆ ನಡೆಸದೇ ಹಿಂದಿನ ಫಲಿತಾಂಶದ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲಾಗಿದೆ. ಆದರೆ ಈ ವಿದ್ಯಾರ್ಥಿಗಳು ಮಾತ್ರ ಈ ನಿರ್ಧಾರದಲ್ಲಿ ಅನ್ಯಾಯವಾಗಿದೆ ಎಂದು ದೂರುತ್ತಿದ್ದಾರೆ.

ಅಲ್ಲದೆ ಮೊದಲ ಹಾಗೂ ತೃತೀಯ ಸೆಮಿಸ್ಟರ್ ಫಲಿತಾಂಶ ಆಧರಿಸಿ ಫಲಿತಾಂಶ ಪ್ರಕಟಿಸಬೇಕು. ಅದನ್ನು ಬಿಟ್ಟು ತೃತೀಯ ಸೆಮಿಸ್ಟರ್ ಒಂದೇ ಮಾನದಂಡದ ಮೇಲೆ ಫಲಿತಾಂಶ ಪ್ರಕಟಿಸಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಪ್ರಥಮ, ದ್ವಿತೀಯ ಹಾಗೂ ತೃತೀಯ ವರ್ಷದ ಸೆಮಿಸ್ಟರ್ ಆಧಾರದ ಮೇಲೆ ನಾಲ್ಕನೇ ಸೆಮಿಸ್ಟರ್ ಫಲಿತಾಂಶವನ್ನು ಪ್ರಕಟಿಸಬೇಕಿತ್ತು. ಆದರೆ ಕಾನೂನು ವಿಶ್ವವಿದ್ಯಾಲಯ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ತೃತೀಯ ಸೆಮಿಸ್ಟರ್ ಒಂದನ್ನೇ ಗಣನೆಗೆ ತೆಗೆದುಕೊಂಡು ಫಲಿತಾಂಶ ಹೊರಡಿಸಿದೆ. ಇದರಿಂದ ರಾಜ್ಯಾದ್ಯಂತ ಸುಮಾರು ಐವತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ರಾಜ್ಯ ಕಾನೂನು ವಿಶ್ವವಿದ್ಯಾಲಯ ಮೊದಲ ಮೂರು ಸೆಮಿಸ್ಟರ್ ಗಣನೆಗೆ ತೆಗೆದುಕೊಂಡು ಫಲಿತಾಂಶ ಹೊರಡಿಸಲಿ. ಇಲ್ಲವಾದರೆ ಪರೀಕ್ಷೆ ನಡೆಸಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದರು. ಈ ನಿರ್ಧಾರದಿಂದ ನಮಗೆ ಅನ್ಯಾಯವಾಗಿದೆ. ಕೋವಿಡ್ ನಿಯಮಾವಳಿಯ ಪ್ರಕಾರ, ಎಲ್ಲರನ್ನೂ ಉತ್ತೀರ್ಣರನ್ನಾಗಿ ಮಾಡಲಿ ಅಥವಾ ಪರೀಕ್ಷೆ ನಡೆಸಲಿ ಎಂಬುದು ವಿದ್ಯಾರ್ಥಿಗಳ ಆಗ್ರಹ.

ABOUT THE AUTHOR

...view details