ಕರ್ನಾಟಕ

karnataka

ETV Bharat / state

ಹುಬ್ಬಳ್ಳಿಯಲ್ಲಿ ಫೆಬ್ರವರಿ 25ಕ್ಕೆ ಬೃಹತ್‌ ಉದ್ಯೋಗ ಮೇಳ! - ವಿದ್ಯಾನಗರದ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್

ಮೆರಿಟ್ಯೂಡ್ ಸ್ಕಿಲ್ ಡೆವಲಪ್ಮೆಂಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ದೆಹಲಿಯ ಎಲೆಕ್ಟ್ರಾನಿಕ್ ಸೆಕ್ಟರ್ ಸ್ಕಿಲ್ ಕೌನ್ಸಿಲ್ ಆಫ್ ಇಂಡಿಯಾದ ಸಹಯೋಗದಲ್ಲಿ ಇದೇ ತಿಂಗಳ 25 ರಂದು ಬೃಹತ್ ಉದ್ಯೋಗ ಮೇಳ ಆಯೋಜಿಸಿದೆ.

press meet
ಸುದ್ದಿಗೋಷ್ಠಿ

By

Published : Feb 22, 2020, 6:48 PM IST

ಹುಬ್ಬಳ್ಳಿ:ಫೆಬ್ರವರಿ 25ರಂದು ವಿದ್ಯಾನಗರದ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್​ನಲ್ಲಿ ಉಚಿತ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಮೆರಿಟ್ಯೂಡ್ ಸ್ಕಿಲ್ ಡೆವಲಪ್ಮೆಂಟ್ ಪ್ರೈವೇಟ್ ಲಿಮಿಟೆಡ್ ನಿರ್ದೇಶಕ ರವೀಂದ್ರ ಕುಮಾರ್ ಪಡೆಸೂರ ಹೇಳಿದರು.

ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೆರಿಟ್ಯೂಡ್ ಸ್ಕಿಲ್ ಡೆವಲಪ್ಮೆಂಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ದೆಹಲಿಯ ಎಲೆಕ್ಟ್ರಾನಿಕ್ ಸೆಕ್ಟರ್ ಸ್ಕಿಲ್ ಕೌನ್ಸಿಲ್ ಆಫ್ ಇಂಡಿಯಾದ ಸಹಯೋಗದಲ್ಲಿ ಉದ್ಯೋಗ ಮೇಳ ಆಯೋಜಿಸಿದೆ. ಮೇಳದಲ್ಲಿ 10ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸುತ್ತಿವೆ. 1,000ಕ್ಕೂ ಹೆಚ್ಚು ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶ ಹೊಂದಿದೆ.‌ ಈ ಹಿನ್ನೆಲೆಯಲ್ಲಿ ಐಟಿಐ, ಡಿಪ್ಲೋಮಾ ಮಾಡಿದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮೇಳದ ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರವೀಂದ್ರ ಕುಮಾರ್ ಪಡೆಸೂರ

ವಿದ್ಯಾರ್ಥಿಗಳು ಬರುವಾಗ ಐದು ಬಯೋಡೆಟಾಗಳೊಂದಿಗೆ ಬರಬೇಕು. ಹೆಚ್ಚಿನ ಮಾಹಿತಿಗೆ ದೂ. ಸಂಖ್ಯೆ- 0836-4264131ಗೆ ಸಂಪರ್ಕಿಸಬಹುದು ಎಂದರು. ಪತ್ರಿಕಾಗೋಷ್ಠಿಯಲ್ಲಿ ಮೆರಿಟ್ಯೂಡ್ ಸ್ಕಿಲ್ ಡೆವಲಪ್ಮೆಂಟ್ ಪ್ರೈವೇಟ್ ಲಿಮಿಟೆಡ್ ಹೆಚ್ಆರ್ ಹೆಡ್ ಹಿದಾಯತ್. ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಪ್ಲೇಸ್‌ಮೆಂಟ್ ಆಫೀಸರ್ ಕಿರಣ್ ಕುಮಾರ್​ ಇದ್ದರು.

ABOUT THE AUTHOR

...view details