ಧಾರವಾಡ : ಮಲಪ್ರಭಾ ಡ್ಯಾಂನಿಂದ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುತ್ತಿದ್ದ ಮುಖ್ಯ ಪೈಪ್ಲೈನ್ ಒಡೆದಿದ್ದು ಅಪಾರ ಪ್ರಮಾಣದ ನೀರು ವ್ಯರ್ಥವಾಗುತ್ತಿದೆ. ಧಾರವಾಡದ ಮೃತ್ಯುಂಜಯ ನಗರದಲ್ಲಿ ಪೈಪ್ಲೈನ್ ಒಡೆದಿದ್ದು ನೀರು ಅಕ್ಕ-ಪಕ್ಕದ ಮನೆಗಳಿಗೆ ನುಗ್ಗಿ ಸಮಸ್ಯೆ ಉಂಟಾಗಿದೆ.
ಪೈಪ್ಲೈನ್ ಒಡೆದು ಅಪಾರ ಪ್ರಮಾಣದ ನೀರು ಪೋಲು - Malaprabha dam water
ಧಾರವಾಡದಲ್ಲಿ ಕುಡಿಯುವ ನೀರು ಸರಬರಾಜು ಮಾಡುತ್ತಿದ್ದ ಪೈಪ್ಲೈನ್ವೊಂದು ಒಡೆದು ಅವಾಂತರ ಸೃಷ್ಟಿಯಾಗಿದೆ. ಅಪಾರ ಪ್ರಮಾಣದ ನೀರು ಪೋಲಾಗುತ್ತಿರುವ ಬಗ್ಗೆ ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ.

ಪೈಪ್ಲೈನ್ ಒಡೆದು ಅಪಾರ ಪ್ರಮಾಣದ ನೀರು ಪೋಲು
ಅಪಾರ ಪ್ರಮಾಣದ ನೀರು ಪೋಲಾಗುತ್ತಿರುವ ವಿಷಯ ತಿಳಿದು ಸ್ಥಳಕ್ಕೆ ಬಂದ ಮಹಾನಗರ ಪಾಲಿಕೆ ಅಧಿಕಾರಿಗಳು ಅದನ್ನು ಸರಿಪಡಿಸುವ ಕೆಲಸ ಕೈಗೆತ್ತಿಕೊಂಡಿದ್ದಾರೆ. ಭಾರಿ ವಾಹನಗಳು ಓಡಾಡುತ್ತಿರುವುದರಿಂದ ಮುಖ್ಯ ಪೈಪ್ಲೈನ್ ಒಡೆದಿದೆ ಎನ್ನಲಾಗುತ್ತಿದೆ.
ಪೈಪ್ಲೈನ್ ಒಡೆದು ಅಪಾರ ಪ್ರಮಾಣದ ನೀರು ಪೋಲು
ಕುಡಿಯುವ ನೀರು ಈ ರೀತಿ ಪೋಲಾಗುತ್ತಿರುವ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಸ್ಥಳೀಯರು, ಬೇಸಿಗೆ ಕಾಲ ಬಂದರೆ ಸಾಕು ಕುಡಿಯುವ ನೀರಿನ ಸಮಸ್ಯೆ ತಾಂಡವಾಡುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಷಯ. ವಿನಾ: ಕಾರಣ ಈ ಪ್ರಮಾಣದಲ್ಲಿ ಕುಡಿಯುವ ನೀರು ಪೋಲಾಗುವುದನ್ನು ಪಾಲಿಕೆ ಅಧಿಕಾರಿಗಳು ತಡೆಯಬೇಕು ಎಂದು ಆಗ್ರಹಿಸಿದ್ದಾರೆ.