ಧಾರವಾಡ: ಹೈದ್ರಾಬಾದ್ನಲ್ಲಿ ಆತ್ಮರಕ್ಷಣೆಗಾಗಿ ಅತ್ಯಾಚಾರಿಗಳನ್ನು ಎನ್ಕೌಂಟರ್ ಮಾಡಿರುವ ಪೊಲೀಸರ ಕ್ರಮವನ್ನು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸ್ವಾಗತಿಸಿದ್ದಾರೆ. ಎನ್ಕೌಂಟರ್ ನಲ್ಲಿ ಭಾಗಿಯಾದ ಅಧಿಕಾರಿಗಳಿಗೆ ಅಭಿನಂದನಾ ವಿಡಿಯೋವನ್ನು ಅವರು ಬಿಡುಗಡೆ ಮಾಡಿದ್ದಾರೆ.
ಹೈದ್ರಾಬಾದ್ ಎನ್ಕೌಂಟರ್ ಸ್ವಾಗತಾರ್ಹ ಎಂದ ಪ್ರಮೋದ್ ಮುತಾಲಿಕ್ - The Hyderabad rapists
ಹೈದ್ರಾಬಾದ್ ಅತ್ಯಾಚಾರಿಗಳನ್ನು ಎನ್ಕೌಂಟರ್ ಮಾಡಿದ್ದು, ಇದರಿಂದ ನನಗೆ ತುಂಬಾ ಸಂತೋಷವಾಗಿದೆ ಎಂದು ಅವರು ಹೇಳಿದ್ದಾರೆ.
ಪ್ರಮೋದ್ ಮುತಾಲಿಕ್
ಧಾರವಾಡದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಹೈದರಾಬಾದ್ನಲ್ಲಿ ನಡೆದ ಪಶುವೈದ್ಯೆ ದಿಶಾ ಅವರ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಎಲ್ಲಾ ಆರೋಪಿಗಳನ್ನು ಇಂದು ಬೆಳಗ್ಗೆ ಎನ್ಕೌಂಟರ್ ಮಾಡಿದ್ದು, ರೇಪಿಸ್ಟ್ಗಳಿಗೆ ತಕ್ಕ ಪಾಠವನ್ನು ಪೊಲೀಸರು ಕಲಿಸಿದ್ದಾರೆ ಎಂದು ಹೇಳಿದ್ದಾರೆ.
ಅತ್ಯಾಚಾರಿಗಳಿಗೆ ಭಯ ಹುಟ್ಟಿಸುವಂತ ಕೆಲಸವನ್ನು ಪೊಲೀಸರು ಮಾಡಿದ್ದಾರೆ. ಇದೊಂದು ಉತ್ತಮ ಹೆಜ್ಜೆ. ಮಾನವ ಹಕ್ಕುಗಳ ಹೆಸರಿನಲ್ಲಿ ಪೊಲೀಸರ ಮೇಲೆ ಒತ್ತಡ ಹಾಕಬಾರದು ಎಂದು ಮುತಾಲಿಕ್ ತಿಳಿಸಿದ್ದಾರೆ.