ಹುಬ್ಬಳ್ಳಿ:ರಾಷ್ಟ್ರಪತಿಗಳ ಕಾರ್ಯಕ್ರಮದಲ್ಲಿ ಕಾಂಗ್ರೆಸ್ನ ಪಾಲಿಕೆ ಸದಸ್ಯರು ವೇದಿಕೆಯ ಮುಂದೆ ಹೈಡ್ರಾಮ ಮಾಡುವ ಮೂಲಕ ಆಡಳಿತಾರೂಢ ಬಿಜೆಪಿಗೆ ಮುಜುಗರವನ್ನುಂಟು ಮಾಡಿದ್ದಾರೆ. ರಾಷ್ಟ್ರಪತಿ ಕಾರ್ಯಕ್ರಮದ ಆರಂಭಕ್ಕೂ ಮುನ್ನವೇ ಕಾಂಗ್ರೆಸ್ ಪಾಲಿಕೆ ಸದಸ್ಯರು ಹೈಡ್ರಾಮ ಮಾಡಿದ್ದು, ಪಾಲಿಕೆ ಮುಂಭಾಗದಲ್ಲಿ ನೆಲದ ಮೇಲೆ ಕುಳಿತು ಅಸಮಾಧಾನ ಹೊರಹಾಕಿದ್ದಾರೆ.
ಪೌರ ಸನ್ಮಾನ ಕಾರ್ಯಕ್ರಮದಲ್ಲಿ ನಮಗೆ ಗೌರವ ಕೊಟ್ಟಿಲ್ಲ ಎಂದು ಕೈ ಸದಸ್ಯರು ಆರೋಪಿಸಿದ್ದಾರೆ. ನಮಗೆ ಆಸನದ ವ್ಯವಸ್ಥೆ ಇಲ್ಲ ಎಂದು ಆರೋಪಿಸಿ ವೇದಿಕೆ ಮುಂಭಾಗದಲ್ಲಿ ಪ್ರತಿಭಟನೆ ಮಾಡಿದ್ದಾರೆ.