ಕರ್ನಾಟಕ

karnataka

ETV Bharat / state

ಬಿಎಸ್​ವೈ ಬಳಿಕ ನಾನೇ  ಮುಂದಿನ​ ಸಿಎಂ:  ಉಮೇಶ್​ ಕತ್ತಿ ಹೊಸ ಬಾಂಬ್​... ತೀವ್ರ ಸಂಚಲನ - ಶಾಸಕ ಉಮೇಶ್​ ಕತ್ತಿ

ಸದ್ಯಕ್ಕೆ ಬಿಎಸ್​ವೈ ಸಿಎಂ ಆಗಿದ್ದಾರೆ. ಅವರ ನಂತರ ನಾನು ಸಿಎಂ ಆಗುವೆ. ನಾನು ಏಕಾಂಗಿ ಏನೂ ಅಲ್ಲ. ನನ್ನ ಹಿಂದೆಯೂ ಸಾಕಷ್ಟು ಜನರಿದ್ದಾರೆ ಎಂದು ಶಾಸಕ ಉಮೇಶ್​ ಕತ್ತಿ ಹೊಸ ಬಾಂಬ್ ಹಾಕಿದ್ದಾರೆ.

ಉಮೇಶ್​ ಕತ್ತಿ

By

Published : Oct 26, 2019, 4:44 PM IST

ಹುಬ್ಬಳ್ಳಿ:ಬಿ.ಎಸ್ ಯಡಿಯೂರಪ್ಪ ನಂತರ ನಾನೇ ರಾಜ್ಯದ ಸಿಎಂ ಅದಕ್ಕಾಗೇ ನನಗೆ ಸಚಿವ ಸ್ಥಾನ ಸಿಕ್ಕಿಲ್ಲ ಎಂದು ಶಾಸಕ ಉಮೇಶ್​ ಕತ್ತಿ ಹೊಸ ಬಾಂಬ್ ಹಾಕಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಾಸಕ ಉಮೇಶ ಕತ್ತಿ

ನಗರದಲ್ಲಿಂದು ಬಿಜೆಪಿ ಸಭೆ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಚಿವರಾಗಿ ಮುಖ್ಯಮಂತ್ರಿಯಾಗಬೇಕು. ಡಿಸಿಎಂ ಅಲ್ಲ. ಡಿಸಿಎಂ ಹುದ್ದೆ ಅಸಾಂವಿಧಾನಿಕ ಹುದ್ದೆಯಾಗಿದೆ. ಮುಂದಿನ ದಿನಗಳಲ್ಲಿ ಸಾಕಷ್ಟು ಬದಲಾವಣೆ ಆಗಲಿದೆ. ಬದಲಾವಣೆ ಮಾಡೋದಕ್ಕಾಗೇ ನನಗೆ ಮಂತ್ರಿ ಸ್ಥಾನ ಕೊಟ್ಟಿಲ್ಲ. ಸದ್ಯಕ್ಕೆ ಬಿಎಸ್​ವೈ ಸಿಎಂ ಆಗಿದ್ದಾರೆ. ಅವರ ನಂತರ ನಾನು ಸಿಎಂ ಆಗುವೆ. ನಾನು ಏಕಾಂಗಿ ಏನೂ ಅಲ್ಲ. ನನ್ನ ಹಿಂದೆಯೂ ಸಾಕಷ್ಟು ಜನರಿದ್ದಾರೆ ಎಂದು ಹೇಳುವ ಮೂಲಕ ಡಿಸಿಎಂ ಲಕ್ಷ್ಮಣ ಸವದಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

ನೆರೆ ಪರಿಹಾರ ನನಗೆ ಸಮಾಧಾನ ತಂದಿದೆ. ಸರ್ಕಾರ ಸಾಕಷ್ಟು ಅನುದಾನ ನೀಡಿದೆ. ಕೇಂದ್ರ ಸರ್ಕಾರ ಇನ್ನೂ 400 ಕೋಟಿ ಕೊಡುವುದಾಗಿ ಹೇಳಿದೆ. ಡಿಸಿಎಂ ಸವದಿ ನನ್ನ ಆತ್ಮೀಯ ಸ್ನೇಹಿತ. ಯಡಿಯೂರಪ್ಪ ನನ್ಮ ರಾಜಕೀಯ ಗುರು ಎಂದರು.

ಅನರ್ಹ ಶಾಸಕರಿಗೂ ಬಿಜೆಪಿಗೂ ಸಂಬಂಧವಿಲ್ಲ ಅನ್ನೋ‌ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅನರ್ಹರಿಂದಲೇ ನಮ್ಮ ಸರ್ಕಾರ ಬಂದಿದೆ. ನಾನು ಸಭೆಯಲ್ಲಿ ಎಲ್ಲಿ ಕೂತರೇ ಏನು. ನಾನು ಏಕಾಂಗಿಯಲ್ಲ. ಸಭೆಯಲ್ಲಿ ಹೇಳಬೇಕಾಗಿದ್ದನ್ನು ಹೇಳಿದ್ದೇನೆ ಎಂದರು.

ABOUT THE AUTHOR

...view details